FACT CHECK | ವಿಮಾನ ಅಪಘಾತದಲ್ಲಿ ಮೃತಪಟ್ಟವರ 242 ಶವಗಳು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ  ಏರ್ ಇಂಡಿಯಾ ವಿಮಾನ  ಅಪಘಾತದಲ್ಲಿ ಮೃತಪಟ್ಟವರ ಶವಗಳು ಎಂದು ತೋರಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುವ ವಿಮಾನ ಅಪಘಾತ. ಕರಾಳ ದಿನ, 242 ಜನರ ಮೃತದೇಹಗಳು” ಎಂದು ಬರೆದಿದ್ದಾರೆ.

ಕೆಲವು ಬಳಕೆದಾರರು ಇದನ್ನು ಅಹಮದಾಬಾದ್‌ಗೆ ಲಿಂಕ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ಅನೇಕ ಶವಪೆಟ್ಟಿಗೆಯನ್ನು ಕಾಣಬಹುದು. ಹಾಗಿದ್ದರೆ ಈ ವಿಡಿಯೋದಲ್ಲಿ ಮಾಡಲಾಗುತ್ತಿರುವ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋದ ಪ್ರಮುಖ ಕೀ ಪ್ರೇಮ್‌fಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಮೇ 9 ರಂದು, ಇನ್‌ಸ್ಟಾಗ್ರಾಮ್ ಬಳಕೆದಾರರು ಈ ವಿಡಿಯೋವನ್ನು ಪಾಕಿಸ್ತಾನದ್ದು ಎಂದು ಹೇಳಿಕೊಂಡು ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ.

ಈ ವೈರಲ್ ವಿಡಿಯೋ ನಕಲಿ ಎಂದು ತಿಳಿದುಬಂದಿದೆ. ಅಪಘಾತಕ್ಕೂ ಬಹಳ ಹಿಂದೆಯೇ ವೈರಲ್ ವಿಡಿಯೋ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದೆ. ಈ ವೈರಲ್ ವಿಡಿಯೋಕ್ಕೂ ಅಹಮದಾಬಾದ್ ಘಟನೆಗೂ ಯಾವುದೇ ಸಂಬಂಧವಿಲ್ಲ. ಅಹಮದಾಬಾದ್ ವಿಮಾನ ಅಪಘಾತದ ಹಿಂದಿನ ದಿನಾಂಕಗಳಲ್ಲಿ ವೈರಲ್ ವಿಡಿಯೋ ಇರುವುದು ನಮಗೆ ಕಂಡುಬಂದಿದೆ.

ಜೂನ್ 11 ರಂದು ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವೈರಲ್ ವಿಡಿಯೋವನ್ನು ಕೂಡ ನಾವು ಕಂಡುಕೊಂಡಿದ್ದೇವೆ. ಇಲ್ಲಿಯೂ ಸಹ ವಿಡಿಯೋ ಪಾಕಿಸ್ತಾನದಿಂದ ಬಂದಿದೆ ಎಂದು ಹೇಳಲಾಗಿದೆ. ವೈರಲ್ ವಿಡಿಯೋ ಎಲ್ಲಿಂದ ಬಂದಿದೆ ಎಂದು ಖಚಿತವಾಗಿ ತಿಳಿದುಬಂದಿಲ್ಲ. ಆದರೆ ಈ ವಿಡಿಯೋಗೂ ಅಹಮದಾಬಾದ್ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಅಹಮದಾಬಾದ್‌ನಲ್ಲಿ ನಡೆದ  ಏರ್ ಇಂಡಿಯಾ ವಿಮಾನ  ಅಪಘಾತದಲ್ಲಿ ಮೃತಪಟ್ಟವರ ಶವಗಳು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ನಕಲಿ ಎಂದು ತಿಳಿದು ಬಂದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಇರಾನ್​ ಕ್ಷಿಪಣಿ ದಾಳಿಯಿಂದ ಅದಾನಿಯ ಹೈಫಾ ಬಂದರು ನಾಶವಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights