FACT CHECK | ಎಂ.ಎಸ್ ಧೋನಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ಕೋಚ್ಆಗಿ ಆಯ್ಕೆಯಾದ್ರಾ?
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ಅಫ್ಘಾನಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಹೇಳುವ ಸುದ್ದಿ ಬುಲೆಟಿನ್ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಹಂಚಿಕೊಳ್ಳಲಾಗಿರುವ ಪೋಸ್ಟ್ನಲ್ಲಿ ಇರುವ ಬರಹವನ್ನು ಅನುವಾದಿಸಿದಾಗ, “ಮಹೇಂದ್ರ ಸಿಂಗ್ ಧೋನಿ ಅಫ್ಘಾನಿಸ್ತಾನ ತಂಡದ ತರಬೇತುದಾರರಾಗುತ್ತಾರೆ” ಎಂದು ಹೇಳಲಾಗಿದೆ.
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್ಅನ್ನು ಹಂಚಿಕೊಂಡಿದ್ದು, ಈ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಇಂತಹ ಯಾವುದೇ ಘೋಷಣೆಯನ್ನು ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಮಾಧ್ಯಮಗಳ ವರದಿಗಳು ಲಭ್ಯವಾಗಿಲ್ಲ. ಒಂದು ವೇಳೆ ಇಂತಹ ಬೆಳವಣಿಗೆಗಳು ನಡೆದಿರುತ್ತಿದ್ದರೆ ಜಾಗತಿಕ ಮಟ್ಟದಲ್ಲಿ ಸುದ್ದಿ ಪ್ರಸಾರವಾಗುತ್ತಿತ್ತು.
ಈ ಬಗ್ಗೆ ಮತ್ತಷ್ಟು ಪರಿಶೀಲಿಸಲು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ (ACB) ಅಧಿಕೃತ ವೆಬ್ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳನ್ನು ಚೆಕ್ ಮಾಡಿದಾಗ, ಧೋನಿ ಅವರ ನೇಮಕಾತಿಯನ್ನು ಸೂಚಿಸುವ ಯಾವುದೇ ಪೋಸ್ಟ್ ಅಥವಾ ಪತ್ರಿಕಾ ಪ್ರಕಟಣೆ ಕಂಡುಬಂದಿಲ್ಲ. ಅದೇ ರೀತಿ, ಎಂಎಸ್ ಧೋನಿ ಅವರ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳು ಅಂತಹ ಬೆಳವಣಿಗೆಯ ಬಗ್ಗೆ ಯಾವುದೇ ಉಲ್ಲೇಖವನ್ನು ಹೊಂದಿಲ್ಲ.
ಆದರೆ, ಡಿಸೆಂಬರ್ 9, 2025 ರಂದು ಕ್ರಿಕ್ಇನ್ಫೋ ಪ್ರಕಟಿಸಿದ ಲೇಖನದಲ್ಲಿ, ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಜೋನಾಥನ್ ಟ್ರಾಟ್ ಅವರು 2025 ರ ಅಂತ್ಯದವರೆಗೆ ಅಫ್ಘಾನಿಸ್ತಾನ ರಾಷ್ಟ್ರೀಯ ತಂಡದ ಮುಖ್ಯ ತರಬೇತುದಾರರಾಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಂಎಸ್ ಧೋನಿ ಅವರನ್ನು ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ತರಬೇತುದಾರರಾಗಿ ನೇಮಿಸಲಾಗಿದೆ ಎಂಬ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ಅಧಿಕೃತ ದೃಢೀಕರಣ ಅಥವಾ ವಿಶ್ವಾಸಾರ್ಹ ಪುರಾವೆಗಳಿಲ್ಲ. ವೈರಲ್ ಪೋಸ್ಟ್ ಸುಳ್ಳು ಮತ್ತು ದಾರಿತಪ್ಪಿಸುವಂತಿದೆ. ಹಾಗಾಗಿ ಪೋಸ್ಟ್ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಇರಾನ್ ಮೇಲೆ ದಾಳಿ ನಡೆಸಲು ಇಸ್ರೇಲ್ ಯುದ್ಧ ವಿಮಾನಗಳು ಹೊರಟಿವೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

