FACT CHECK | ಇಸ್ರೇಲ್ ದಾಳಿಗೆ ಹೆದರಿ ಇರಾನ್ ಜನರು ಪಾಕಿಸ್ತಾನಕ್ಕೆ ಹೋಗುತ್ತಿರುವುದು ನಿಜವೇ?

ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ದಾಳಿಯ ನಡುವೆ, ಇರಾನಿ ಪ್ರಜೆಗಳು ಪಾಕಿಸ್ತಾನಕ್ಕೆ ಆಶ್ರಯ ಪಡೆಯಲು ಹೋಗುತ್ತಿದ್ದಾರೆ ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತದೆ. ಈ ವಿಡಿಯೋದಲ್ಲಿ ಗಡಿ ದ್ವಾರ ತೆರೆದ ತಕ್ಷಣ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ಒಳ ಪ್ರವೇಶಿಸುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ‘‘ಇಸ್ರೇಲ್ ದಾಳಿಯಿಂದ ಭಯಭೀತರಾಗಿ ಪಾಕಿಸ್ತಾನದಲ್ಲಿ ಆಶ್ರಯ ಪಡೆಯಲು, ಪಾಕಿಸ್ಥಾನಕ್ಕೆ ಆಗಮಿಸುತ್ತಿರುವ ಇರಾನಿ ಪ್ರಜೆಗಳು’’ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು  ವೈರಲ್ ವೀಡಿಯೊದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಆಗಸ್ಟ್ 9, 2024 ರಂದು ಇದೇ ವೈರಲ್ ವೀಡಿಯೊವನ್ನು ಫೇಸ್​ಬುಕ್ ಬಳಕೆದಾರರೊಬ್ಬರು ಹಂಚಿಕೊಂಡಿರುವುದುಲಭ್ಯವಾಗಿದೆ. ಹೀಗಾಗಿ ಇದು ನಡೆಯುತ್ತಿರುವ ಸಂಘರ್ಷಕ್ಕಿಂತ ಹಿಂದಿನದು ಎಂದು ತೋರಿಸುತ್ತದೆ.

ಪೋಸ್ಟ್‌ನಲ್ಲಿರುವ ಮಾಹಿತಿಯ ಪ್ರಕಾರ, ಕರ್ಬಾಲಾಗೆ ಹೋಗುವ ಯಾತ್ರಾರ್ಥಿಗಳನ್ನು ಪಾಕಿಸ್ತಾನ-ಇರಾನ್ ಗಡಿಯಲ್ಲಿ ಸ್ವಾಗತಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಆಗಸ್ಟ್ 10, 2024 ರಂದು ಹಂಚಿಕೊಂಡ ಯೂಟ್ಯೂಬ್‌ನಲ್ಲಿ ವೈರಲ್ ಕ್ಲಿಪ್ ಅನ್ನು ಸಹ ನಾವು ಕಂಡುಕೊಂಡಿದ್ದೇವೆ. ಇದಲ್ಲದೆ, ಆಗಸ್ಟ್ 30, 2023 ರಂದು, ಮಾಜಿ ಎಕ್ಸ್ ಬಳಕೆದಾರರೊಬ್ಬರು ಅದೇ ವೀಡಿಯೊವನ್ನು ಪೋಸ್ಟ್ ಮಾಡಿ, ತಫ್ತಾನ್ ಗಡಿಯಲ್ಲಿ ಅರ್ಬೈನ್‌ ಯಾತ್ರಿಕರಿಗೆ ಉಂಟಾದ ಅವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು.

ಇರಾನ್ ಪ್ರೆಸ್ ವರದಿಯ ಪ್ರಕಾರ, 2023 ರಲ್ಲಿ, 10,000 ಕ್ಕೂ ಹೆಚ್ಚು ಪಾಕಿಸ್ತಾನಿ ಯಾತ್ರಿಕರು ತಫ್ತಾನ್ ಗಡಿಯ ಮೂಲಕ ಅರ್ಬೈನ್‌ಗೆ ಹೋಗಿದ್ದರು.

ವಾಸ್ತವವಾಗಿ, ಮೊಹರಂ ಮತ್ತು ಅರ್ಬೈನ್‌ನಂತಹ ಧಾರ್ಮಿಕ ಕಾರ್ಯಕ್ರಮಗಳ ಸಮಯದಲ್ಲಿ ತಫ್ತಾನ್ ಗಡಿಯ ಪ್ರಾಮುಖ್ಯತೆ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ಪಾಕಿಸ್ತಾನಿ ಯಾತ್ರಿಕರು ಇರಾಕ್‌ನ ಕರ್ಬಲಾದಲ್ಲಿರುವ ಇಮಾಮ್ ಹುಸೇನ್ ಅವರ ದೇವಾಲಯಕ್ಕೆ ಗೌರವ ಸಲ್ಲಿಸಲು ಈ ಮಾರ್ಗದ ಮೂಲಕ ಹಾದು ಹೋಗುತ್ತಾರೆ. ತಫ್ತಾನ್ ಗಡಿ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಚಗೈ ಜಿಲ್ಲೆಯಲ್ಲಿದೆ ಮತ್ತು ಇದು ಇರಾನ್‌ನೊಂದಿಗೆ ಗಡಿಯನ್ನು ದಾಟಲು ಒಂದು ಮಾರ್ಗವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೊ ಇತ್ತೀಚಿನದಲ್ಲ, ಬದಲಿಗೆ 2023 ರಿಂದ ಇದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಇರಾನ್- ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | 2ನೇ ಮತ್ತು 4ನೇ ಶನಿವಾರ ಸರ್ಕಾರಿ ನೌಕರರಿಗೆ ರಜೆಗಳು ರದ್ದಾಗಿವೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights