FACT CHECK | ಇರಾನ್ ದಾಳಿಗೆ ಅಮೆರಿಕದ ಯುದ್ಧ ವಿಮಾನಗಳು ಭಾರತದ ವಾಯುಪ್ರದೇಶವನ್ನು ಬಳಸಿಕೊಂಡಿವೆಯೇ?
ಇರಾನ್‌ನ ಪರಮಾಣು ಮೂಲಸೌಕರ್ಯದ ವಿರುದ್ಧ ಪ್ರಾರಂಭಿಸಲಾದ ಆಪರೇಷನ್ ಮಿಡ್‌ನೈಟ್ ಹ್ಯಾಮರ್ ಅನ್ನು ನಡೆಸಲು ಅಮೆರಿಕ ಸೇನೆಯು ಭಾರತೀಯ ವಾಯುಪ್ರದೇಶವನ್ನು ಬಳಸಿಕೊಂಡಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕದ ಯುದ್ಧ ವಿಮಾನಗಳು ಭಾರತದ ವಾಯುಪ್ರದೇಶವನ್ನು ಬಳಸಿಕೊಂಡಿವೆ ಎಂಬ ಹೇಳಿಕೆಯೊಂದಿಗೆ ಕೆಲವು ಸೋಷಿಯಲ್ ಮೀಡಿಯಾ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.
ಇದೇ ರೀತಿಯ ಪ್ರತಿಪಾದನೆಯನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್ಅನ್ನು ಹಂಚಿಕೊಂಡಿದ್ದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್ ಮೂಲಕ ಸರ್ಚ್ ಮಾಡಿದಾಗ, ಪಿಟಿಐ ವರದಿಯ ಪ್ರಕಾರ, ಭಾನುವಾರ ಮುಂಜಾನೆ ಅಮೆರಿಕ ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿತು, ಇರಾನ್ ಪ್ರತೀಕಾರ ತೀರಿಸಿಕೊಂಡರೆ ಹೆಚ್ಚುವರಿ ದಾಳಿಗಳ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
“ಆಪರೇಷನ್ ಮಿಡ್‌ನೈಟ್ ಹ್ಯಾಮರ್ ಸಮಯದಲ್ಲಿ ಇರಾನ್ ವಿರುದ್ಧ ವಿಮಾನಗಳನ್ನು ಹಾರಿಸಲು ಅಮೆರಿಕವು ಭಾರತೀಯ ವಾಯುಪ್ರದೇಶವನ್ನು ಬಳಸಿಕೊಂಡಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳು ಹೇಳಿಕೊಂಡಿವೆ. ಈ ಪ್ರತಿಪಾದನೆ ಸುಳ್ಳು” ಎಂದು ಪಿಐಬಿ ಫ್ಯಾಕ್ಟ್ ಚೆಕ್ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.
Several social media accounts have claimed that Indian Airspace was used by the United States to launch aircrafts against Iran during Operation #MidnightHammer #PIBFactCheck
❌ This claim is FAKE
❌Indian Airspace was NOT used by the United States during Operation… pic.twitter.com/x28NSkUzEh
— PIB Fact Check (@PIBFactCheck) June 22, 2025
“ಆಪರೇಷನ್ #ಮಿಡ್‌ನೈಟ್ ಹ್ಯಾಮರ್ ಸಮಯದಲ್ಲಿ ಅಮೆರಿಕವು ಭಾರತೀಯ ವಾಯುಪ್ರದೇಶವನ್ನು ಬಳಸಲಿಲ್ಲ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪಿಐಬಿ ಫ್ಯಾಕ್ಟ್ ಚೆಕ್ ಘಟಕ ತಿಳಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ, ಮಿಡ್‌ನೈಟ್ ಹ್ಯಾಮರ್ ಕಾರ್ಯಾಚರಣೆಗಾಗಿ ಅಮೆರಿಕ ಭಾರತೀಯ ವಾಯುಪ್ರದೇಶವನ್ನು ಬಳಸಿಕೊಂಡಿದೆ ಎಂಬುದು ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದು ಸುಳ್ಳು

