FACT CHECK | ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಫೋಟೊ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡ ಬಿಜೆಪಿ ಬೆಂಬಲಿಗರು

ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮಹಿಳೆಯರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಚಿತ್ರ ಇರುವ ಸ್ಯಾನಿಟರಿ ಪ್ಯಾಡ್ ಗಳ ಹಂಚಿಕೆ ವಿಚಾರ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ. ಬಿಹಾರ ಕಾಂಗ್ರೆಸ್ ಘಟಕದಿಂದ ಈ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಸ್ಯಾನಿಟರಿ ಪ್ಯಾಡ್‌ನೊಳಗೆ ರಾಹುಲ್ ಗಾಂಧಿ ಅವರ ಚಿತ್ರ ಇರುವುದು ವಿವಾದಕ್ಕೆ ಕಾರಣವಾಗಿತ್ತು.

 

View this post on Instagram

 

A post shared by Amith Gowda (@amith5693)

Image

ಆದರೆ ಕೆಲ ಸಾಮಾಜಿಕ ಮಾಧ್ಯಮಗಳ ಬಳಕೆದಾರರ ವಿಡಿಯೋವನ್ನು ಹಂಚಿಕೊಂಡು ಸ್ಯಾನಿಟರಿ ಪ್ಯಾಡ್  ಮೇಲೆ ರಾಹುಲ್ ಗಾಂಧಿ ಅವರ ಚಿತ್ರವನ್ನು ಮುದ್ರಿಸಲಾಗಿದೆ ಎಂದು ಪ್ರತಿದಿಸಿ ತಮ್ಮ ವಯಕ್ತಿಕ ಖಾತೆಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯನ್ನು ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದು ರಾಹುಲ್ ಗಾಂಧಿ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ ಮೇಲೆ ಹಾಕಲಾಗಿದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವಂತೆ ಬಿಹಾರದಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಲು ಉದ್ದೇಶಿಸಿರುವ ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಚಿತ್ರವನ್ನು ಹಾಕಲಾಗಿದೆಯೇ ಎಂದು ಪರಿಶೀಲಿಸಿಲು ಸರ್ಚ್ ಮಾಡಿದಾಗ, ಇದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದ್ದು, ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಪಕ್ಷ ಮಹಿಳಾ ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ ಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕ್‌ಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದೆ ಎಂದು ವರದಿಯಾಗಿದೆ.

`ಪ್ರಿಯದರ್ಶಿನಿ ಉಡಾನ್ ಯೋಜನಾ’ ಎಂಬ ಈ ಯೋಜನೆಯಡಿ, ಬಿಹಾರದಲ್ಲಿ 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಈ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಈ ಯೋಜನೆಯು ಋತುಸ್ರಾವದ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷದ ನಾಯಕರು ಹೇಳಿದ್ದಾರೆ.

 

ಇನ್ನು ಸ್ಯಾನಿಟರಿ ಪ್ಯಾಡ್ ನಲ್ಲಿ ರಾಹುಲ್ ಗಾಂಧಿ ಚಿತ್ರವನ್ನು ತಪ್ಪಾಗಿ ಹಂಚಿಕೊಂಡು ಟ್ರೋಲ್ ಮಾಡುತ್ತಿರುವ ಬಿಜೆಪಿ  ಬೆಂಬಲಿಗರಿಗೆ ಕಾಂಗ್ರೆಸ್ ಟ್ವಿಟ್ ಮೂಲಕ ತಿರುಗೇಟು ನೀಡಿದೆ, ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಚಿತ್ರವನ್ನು ತಪ್ಪಾಗಿ ಹಂಚಿಕೊಂಡಿದೆ.  ಎಂದು ತಿಳಿಸಿದೆ.

ರಾಹುಲ್ ಗಾಂಧಿ ಫೋಟೊವನ್ನು ಪ್ಯಾಡ್‌ನಲ್ಲಿ ಹಾಕಿದ್ದಾರೆ ಎಂದು ಹಂಚಿಕೊಂಡ ಟ್ವೀಟ್‌ ಅನ್ನು ಬಿಜೆಪಿ ಬೆಂಬಲಿ ಎಕ್ಸ್‌ ಬಳಕೆದಾರ ಮಿ. ಸಿನ್ಹಾ ಎಂಬುವವರು ಡಿಲಿಟ್ ಮಾಡಿದ್ದು ಅದರ ಸ್ಕ್ರೀನ್‌ಶಾಟ್‌ನ ರೀ ಟ್ವೀಟ್ ಮಾಡಿರುವ @swati_mishr , ಮಿ.ಸಿನ್ಹಾ ಪ್ರತಿ ದಿನವೂ ನಕಲಿ ಸುದ್ದಿಗಳೊಂದಿಗೆ ಟ್ವೀಟ್‌ಗಳನ್ನು ಪೋಸ್ಟ್ ಮಾಡುತ್ತಾರೆ ಮತ್ತು ಸಿಕ್ಕಿಬಿದ್ದಾಗ ಅವುಗಳನ್ನು ಅಳಿಸುತ್ತಾರೆ, ಆದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಅವರು ಇದನ್ನು ಮತ್ತೆ ಮತ್ತೆ ಮಾಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ನ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಾಂಬಾ, ‘ಆಧುನಿಕ ಯುಗದಲ್ಲಿ ಸವಾಲು ರಾಹುಲ್ ಗಾಂಧಿ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ನ ಮೇಲೆ ಏಕೆ ಮುದ್ರಿಸಲಾಯಿತು ಎಂಬುದಲ್ಲ. ಬಿಹಾರದಲ್ಲಿ ಇಂದಿಗೂ ಮಹಿಳೆಯರು ಋತುಸ್ರಾವದ ಸಮಯದಲ್ಲಿ ಬಟ್ಟೆಯನ್ನು ಬಳಸಿಕೊಂಡು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿರುವುದೇ ಮೂಲ ಸಮಸ್ಯೆಯಾಗಿದೆ. ಬಿಜೆಪಿಯ ಚಿಂತನೆ ಯಾವಾಗಲೂ ಮಹಿಳಾ ವಿರೋಧಿಯಾಗಿದೆ’ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ಈ ಬಗ್ಗೆ ಅವರು ವಿಡಿಯೋವನ್ನು ಹಂಚಿಕೊಂಡಿದ್ದು ಕಾಂಗ್ರೆಸ್‌ ಮಹಿಳೆಯರಿಗೆಂದು ಹಂಚಿರುವ ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಚಿತ್ರ ಇದೆ ಎಂದು ನಕಲಿ  ವಿಡಿಯೋವನ್ನು BJP ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಆದರೆ ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಚಿತ್ರ ವಿಲ್ಲ ಬದಲಿಗೆ ಪ್ಯಾಕೆಟ್‌ ಮೇಲೆ ರಾಹುಲ್ ಗಾಂಧಿ ಚಿತ್ರ ಇದೆ ಎಂದು ತಿಳಿಸಿದೆ.

ಇನ್ನು ಕಾಂಗ್ರೆಸ್ ಪಕ್ಷದ ಈ ಯೋಜನೆ ಸದುದ್ದೇಶದ್ದೇ ಆದರೂ ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್‌ಗಳ ಮೇಲೆ ರಾಹುಲ್ ಗಾಂಧಿ ಅವರ ಚಿತ್ರ ಹಾಕಿಸಿರುವುದು ವಿವಾದಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಅವರ ಚಿತ್ರವನ್ನು ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್‌ಗಳ ಮೇಲೆ ಮುದ್ರಿಸಿರುವುದನ್ನು ಬಿಜೆಪಿ ಮತ್ತು ಜೆಡಿಯು ತೀವ್ರವಾಗಿ ಖಂಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಿಹಾರದ ಚುನಾವಣೆಯಲ್ಲಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಚಿತ್ರ ಇರುವ ಸ್ಯಾನಿಟರಿ ಪ್ಯಾಡ್ ಗಳ ಹಂಚಿಕೆ ಮಾಡಲಾಗುತ್ತಿದ್ದು ಬಿಜೆಪಿ ಬೆಂಬಲಿಗರು  ಸ್ಯಾನಿಟರಿ ಪ್ಯಾಡ್ ನ ಪ್ಯಾಕ್‌ ಮೇಲೆ ಹಾಕಲಾಗಿರುವ ರಾಹುಲ್ ಗಾಂಧಿ ಚಿತ್ರವನ್ನು ತಪ್ಪಾಗಿ ಹಂಚಿಕೊಳ್ಳುವ ಮೂಲಕ ಪಾಡ್‌ನಲ್ಲಿ ರಾಹುಲ್ ಚಿತ್ರವನ್ನು ಹಾಕಲಾಗಿದೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೇಲೆ ಕೋತಿಯೊಂದು ದಾಳಿ ಮಾಡುತ್ತಿರುವ ವಿಡಿಯೋದ ಅಸಲೀಯತ್ತೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights