FACT CHECK | ಜಗದೀಪ್ ಧನ್ಖರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಕಚೇರಿಗೆ ಬೀಗ ಹಾಕಲಾಗಿದೆಯೇ?
ಜಗದೀಪ್ ಧನ್ಖರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಕಚೇರಿಗೆ ಬೀಗ ಹಾಕಲಾಗಿದೆ ಎನ್ನುವ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ. ಸರ್ಕಾರವು ಉಪ ರಾಷ್ಟ್ರಪತಿ ಕಚೇರಿಗೆ ಬೀಗ ಹಾಕಿದೆ, ಉಪ ರಾಷ್ಟ್ರಪತಿಗೆ ತಮ್ಮ ಅಧಿಕೃತ ನಿವಾಸವನ್ನು ತಕ್ಷಣ ಖಾಲಿ ಮಾಡುವಂತೆ ಕೇಳಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಜಗದೀಪ್ ಧನ್ಖರ್ ಜುಲೈ 21ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯಕ್ಕೆ ಸಂಬಂಧಿಸಿದ ಕಾರಣವನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು. ಆರ್ಟಿಕಲ್ 67 (ಎ) ಅನ್ನು ಉಲ್ಲೇಖಿಸಿ ಅವರು ಈ ರಾಜೀನಾಮೆಯನ್ನು ನೀಡಿದ್ದಾರೆ. ತಮ್ಮ ರಾಜೀನಾಮೆಯಲ್ಲಿ, ಅವರು ಪ್ರಧಾನಿ ಮೋದಿ ಮತ್ತು ಇತರ ಸಂಸದರಿಗೆ ಧನ್ಯವಾದ ಅರ್ಪಿಸಿದ್ದರು. ಜಗದೀಪ್ ಧನ್ಖರ್ ಸಂಸತ್ತಿನ ಆವರಣದ ಬಳಿಯ ಚರ್ಚ್ ರಸ್ತೆಯಲ್ಲಿರುವ ಉಪರಾಷ್ಟ್ರಪತಿ ಎನ್ಕ್ಲೇವ್ನಲ್ಲಿ ವಾಸಿಸುತ್ತಿದ್ದಾರೆ. ಕಳೆದ ವರ್ಷವಷ್ಟೇ ಈ ಬಂಗಲೆಗೆ ಸ್ಥಳಾಂತರಗೊಂಡಿದ್ದರು.
ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಸರ್ಕಾರದ ಫ್ಯಾಕ್ಟ್‌ಚೆಕ್ ಘಟಕ ಪಿಐಬಿ 23 ಜುಲೈ 2025ರಂದು ತನ್ನ ಟ್ವೀಟ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ.
ಪಿಐಬಿಯು ಹಂಚಿಕೊಂಡಿರುವ ಮಾಹಿತಿಯಲ್ಲಿ ಸರ್ಕಾರವು ಉಪ ರಾಷ್ಟ್ರಪತಿ ಕಚೇರಿಗೆ ಬೀಗ ಹಾಕಿದೆ, ಉಪ ರಾಷ್ಟ್ರಪತಿಗೆ ತಮ್ಮ ಅಧಿಕೃತ ನಿವಾಸವನ್ನು ತಕ್ಷಣ ಖಾಲಿ ಮಾಡುವಂತೆ ಕೇಳಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಇದೆಲ್ಲಾ ಸುಳ್ಳು ಎಂದು ಹೇಳಿದೆ.
ವ್ಯವಹಾರ ಸಲಹಾ ಸಮಿತಿಯ ಸಭೆಗಳು ಸೇರಿದಂತೆ ಪ್ರಮುಖ ಸಭೆಗಳು ಅದೇ ದಿನ ನಿಗದಿಯಂತೆ ನಡೆದವು. ಉಪ ರಾಷ್ಟ್ರಪತಿ ಕಚೇರಿಯಲ್ಲಿ ಎಂದಿನಂತೆ ವ್ಯವಹಾರಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಸೋಮವಾರ, ಧನ್ಖರ್ ಅವರು ಅನಾರೋಗ್ಯ ಕಾರಣಗಳನ್ನು ನೀಡಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಂಗಳವಾರ ಅವರ ರಾಜೀನಾಮೆಯನ್ನು ಅಂಗೀಕರಿಸಲಾಯಿತು. ಧನ್ಖರ್ ರಾಜೀನಾಮೆಯ ನಂತರ, ದೇಶದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದೆ. ಹೊಸ ಉಪ ರಾಷ್ಟ್ರಪತಿ ಯಾರು ಎಂಬುದರ ಕುರಿತು ಹಲವು ಊಹಾಪೋಹಗಳು ಕೇಳಿಬರುತ್ತಿವೆ.
ಒಟ್ಟಾರೆಯಾಗಿ ಹೇಳುವುದಾದರೆ, ಜಗದೀಪ್ ಧನ್ಖರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಕಚೇರಿಗೆ ಬೀಗ ಹಾಕಲಾಗಿದೆ ಎನ್ನುವ ಹೇಳಿಕೆ ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : FACT CHECK | ಚಂದನ್ ಮಿಶ್ರಾ ಕೊಲೆ ಪ್ರಕರಣದ ಆರೋಪಿಗಳಿಗೆ ಗುಂಡೇಟು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

