FACT CHECK | ಡಾ. ಮನಮೋಹನ್ ಸಿಂಗ್ ಚೀನಾದ ನಿಯೋಗವನ್ನು ಭೇಟಿಯಾಗುತ್ತಿರುವ ಈ ಸಂದರ್ಭದಲ್ಲಿ ಅವರು ಭಾರತದ ಪ್ರಧಾನಿ ಆಗಿರಲಿಲ್ಲ

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚೀನಾದ ನಿಯೋಗವನ್ನು ಭೇಟಿಯಾಗುತ್ತಿರುವುದಿದೆ. ಬಳಕೆದಾರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಕಾಂಗ್ರೆಸ್ ಪಕ್ಷ ಅಧಿಕಾರದ ಒಂದು ಕಾಲದಲ್ಲಿ ಭಾರತದ ಪ್ರಧಾನ ಮಂತ್ರಿಯ ಪರಿಸ್ಥಿತಿ ಹೀಗಿತ್ತು. 2014ರ ನಂತರ ಈಗಿನ ಕಾಲದಲ್ಲಿ ಹೀಗೆ ಇಲ್ಲ ಯಾಕ್ ಅಂದ್ರೆ ಮೋದಿ ಯುಗದ ನವ ಭಾರತದ ಭಾರತ ಸರ್ಕಾರ’’ ಎಂದು ಬರೆದುಕೊಂಡಿದ್ದಾರೆ.

ಇದರಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚೀನಾದ ನಿಯೋಗವನ್ನು ಭೇಟಿಯಾಗುತ್ತಿರುವುದಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ ಮತ್ತು ಸೋನಿಯಾ ಗಾಂಧಿ ಅತಿಥಿಗಳನ್ನು ಸ್ವಾಗತಿಸುವಲ್ಲಿ ಮುಂದಾಳತ್ವ ವಹಿಸಿದ್ದರು ಮತ್ತು ಆ ಮೂಲಕ ಮನಮೋಹನ್ ಸಿಂಗ್ ಅವರನ್ನು ಕಡೆಗಣಿಸಿದರು ಎಂದು ವೀಡಿಯೊ ಜೊತೆಗಿನ ಹೇಳಿಕೆ ಸೂಚಿಸುತ್ತದೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ವಿಡಿಯೋದ ಕೀ ಫ್ರೇಮ್‌ಗಳನ್ನು ತೆಗದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಜೂನ್ 16, 2015 ರಂದು ಕಾಂಗ್ರೆಸ್‌ನX ಖಾತೆಯಲ್ಲಿ ಪೋಸ್ಟ್‌ ಮಾಡಿದ ವಿಡಿಯೋ ಲಭ್ಯವಾಗಿದ್ದು, ಪೋಸ್ಟ್‌ನ ಶೀರ್ಷಿಕೆ ಹೀಗಿದೆ, “ಚೀನೀ ಸಂಸದೀಯ ನಿಯೋಗವು ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದೆ.”

Sonia Gandhi-Manmohan Singh Video: Fact Check

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್‌ಗಳೊಂದಿಗೆ ಸುದ್ದಿಗಳನ್ನು ಸರ್ಚ್ ಮಾಡಿದಾಗ, ಹಲವು ವರದಿಗಳು ಲಭ್ಯವಾಗಿದೆ. ಜೂನ್ 16, 2015 ರಂದು ಝೀ ನ್ಯೂಸ್ ವರದಿಯು ವೈರಲ್ ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿದೆ. ವರದಿಯ ಪ್ರಕಾರ, “ಚೀನಾದ ಸಂಸದೀಯ ನಿಯೋಗವು ಮಂಗಳವಾರ ದೆಹಲಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಹಾಜರಿದ್ದರು. ರಾಷ್ಟ್ರೀಯ ಪೀಪಲ್ಸ್ ಕಾಂಗ್ರೆಸ್ ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಂಗ್ ಡೆಜಿಯಾಂಗ್ ನೇತೃತ್ವದ ನಿಯೋಗವು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಲವಾರು ಪ್ರಮುಖ ಭಾರತೀಯ ಸಂಸದರನ್ನು ಭೇಟಿ ಮಾಡಿತ್ತು.”

ಸಭೆಯ ಪೂರ್ಣ ದೃಶ್ಯಗಳನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಜೂನ್ 16, 2025 ರಂದು ಪೋಸ್ಟ್ ಮಾಡಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ವೀಡಿಯೊ 2015 ರದ್ದಾಗಿದೆ, ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿರಲಿಲ್ಲ. 2015 ರಲ್ಲಿ ಚೀನಾದ ನಿಯೋಗದೊಂದಿಗಿನ ಈ ಸಭೆಯ ಸಮಯದಲ್ಲಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು ಮತ್ತು ಮನಮೋಹನ್ ಸಿಂಗ್ ರಾಜ್ಯಸಭಾ ಸದಸ್ಯರಾಗಿದ್ದರು. ಮನಮೋಹನ್ ಸಿಂಗ್ 22 ಮೇ 2004 ರಿಂದ 26 ಮೇ 2014 ರವರೆಗೆ ದೇಶದ ಪ್ರಧಾನ ಮಂತ್ರಿಯಾಗಿದ್ದರು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : FACT CHECK | ಮತ ಕಳ್ಳತನ ವಿರುದ್ಧದ ರ್‍ಯಾಲಿಯಲ್ಲಿ ಬಿಜೆಪಿ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ರಾ ಶಾಲಾ ಮಕ್ಕಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights