FACT CHECK : ಪಂಚ ರಾಜ್ಯ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದೆಯೇ?

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ (Crude Oil) ಬೆಲೆ ಏರಿಕೆಯಾಗಿರುವುದರಿಂದ ಮತ್ತು ತೈಲ ಕಂಪನಿಗಳು ನಷ್ಟ ಅನುಭವಿಸುತ್ತಿರುವುದರಿಂದ, ಏಪ್ರಿಲ್ 29ರಂದು ಪಂಚ ರಾಜ್ಯಗಳ ಚುನಾವಣೆ ಮುಗಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ಸುಮಾರು ₹25 ರಿಂದ ₹28 ರಷ್ಟು ಏರಿಕೆಯಾಗಬಹುದು ಎಂದು ಕೆಲವು ವರದಿಗಳು (ಮುಖ್ಯವಾಗಿ ಕೋಟಕ್ ಇನ್‌ಸ್ಟಿಟ್ಯೂಷನಲ್ ಈಕ್ವಿಟೀಸ್ ವರದಿ) ಹೇಳಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ₹25 ರಿಂದ ₹28 ರಷ್ಟು ಏರಿಕೆ!!

“ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ ಅಂತಹ ಯಾವುದೇ ಪ್ರಸ್ತಾಪವು ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಪೋಸ್ಟ್‌ ಮಾಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಅಭಿಯಾನ ನಡೆಯುತ್ತಿದೆ. ಈ ಅಭಿಯಾನವು ಸಂಪೂರ್ಣವಾಗಿ ಸುಳ್ಳು. ಏಪ್ರಿಲ್ 29 ರಂದು ಎರಡನೇ ಮತ್ತು ಕೊನೆಯ ಹಂತದ ಚುನಾವಣೆ ಮುಗಿದ ಬಳಿಕ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳಲ್ಲಿ ತೀವ್ರ ಏರಿಕೆಯಾಗುವ ಬಗ್ಗೆ ಸಾಕಷ್ಟು ಮಾತುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಸಚಿವಾಲಯ ಈ ಸ್ಪಷ್ಟನೆ ನೀಡಿದೆ.

ಆದರೆ ಈ ಎಲ್ಲಾ ವರದಿಗಳನ್ನು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಅಂತಹ ಯಾವುದೇ ಬೆಲೆ ಏರಿಕೆ ಪ್ರಸ್ತಾಪ ಸರ್ಕಾರದ ಮುಂದೆ ಎಂದು ಹೇಳಿದೆ.

Petrol diesel price

ಪೆಟ್ರೋಲ್ ಅಥವಾ ಡೀಸೆಲ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಇಂತಹ ಸುದ್ದಿಗಳು ಜನರಲ್ಲಿ ಆತಂಕ ಮತ್ತು ಭಯ ಹುಟ್ಟಿಸಲು ಹರಡಿಸಲಾಗುತ್ತಿರುವ ಹಾದಿ ತಪ್ಪಿಸುವ (Misleading) ಸುದ್ದಿಗಳಾಗಿವೆ ಎಂದು ಸರ್ಕಾರ ಹೇಳಿದೆ.

ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಹೆಚ್ಚಾಗಿವೆ. ಆದರೆ, ದೇಶದಲ್ಲಿ ರೀಟೇಲ್ ಇಂಧನ ಬೆಲೆಯಲ್ಲಿ ಏರಿಕೆ ಆಗಿಲ್ಲ. ಇದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಿಗೆ ತಿಂಗಳಿಗೆ 27,000 ಕೋಟಿ ರೂ ಹೆಚ್ಚುವರಿ ಹೊರೆ ಆಗುತ್ತಿದೆ ಎಂದು ಕೋಟಕ್​ನ ಈ ವರದಿಯಲ್ಲಿ ವಿಶ್ಲೇಷಿಸಲಾಗಿತ್ತು.

ಸರ್ಕಾರ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸಲ್ ಮೇಲೆ ಅಬಕಾರಿ ಸುಂಕವನ್ನು ಕಡಿತಗೊಳಿಸಿರುವ ಕ್ರಮ ಉಲ್ಲೇಖಿಸಿದ ಕೋಟಕ್ ಇನ್ಸ್​ಟಿಟ್ಯೂಶನಲ್ ಈಕ್ವಿಟೀಸ್​ನ ವರದಿಯು, ಈ ಸುಂಕ ಕಡಿತದಿಂದ ತೈಲ ಕಂಪನಿಗಳಿಗೆ ಒಂದಷ್ಟು ರಿಲೀಫ್ ಕೊಟ್ಟಿವೆಯಾದರೂ, ದೀರ್ಘಕಾಲದ ಪರಿಹಾರ ಸಿಕ್ಕಿಲ್ಲ. ಹೀಗಾಗಿ, ಪೆಟ್ರೋಲ್, ಡೀಸಲ್ ಬೆಲೆ ಏರಿಸಬೇಕಾಗಬಹುದು ಎಂದು ಅಭಿಪ್ರಾಯಪಟ್ಟಿದೆ.

ಆದರೆ, ಇಂಧನ ಬೆಲೆ ಏರಿಕೆ ಸಾಧ್ಯತೆಯನ್ನು ಸರ್ಕಾರ ತಳ್ಳಿಹಾಕಿದೆ. ‘ಕಳೆದ 5 ವರ್ಷದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಏರಿಸದೇ ಇರುವ ಏಕೈಕ ದೇಶ ಭಾರತ. ಅಂತಾರಾಷ್ಟ್ರೀಯ ದರಗಳು ಗಣನೀಯವಾಗಿ ಏರಿಕೆಯಾದರೂ ಭಾರತೀಯ ನಾಗರಿಕರಿಗೆ ಅದರ ಬಿಸಿ ತಾಗದಂತೆ ಭಾರತ ಸರ್ಕಾರ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿವೆ’ ಎಂದು ಪೆಟ್ರೋಲಿಯಂ ಸಚಿವಾಲಯವು ತನ್ನ ಟ್ವೀಟ್​ನಲ್ಲಿ ಹೇಳಿದೆ.


ಇದನ್ನು ಓದಿರಿ : FACT CHECK : ಮಸಾಜ್ ಪಾರ್ಲರ್‌ನಲ್ಲಿ ಫೇಶಿಯಲ್ ಮಾಡಿಸಿಕೊಳ್ಳುತ್ತಿರುವುದು ಪ್ರಧಾನಿ ಮೋದಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ


ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights