FACT CHECK : ಪಶ್ಚಿಮ ಬಂಗಾಳದ ಚುನಾವಣೆಯ ನಂತರ CPI (M) ರಾಮ ಭಜನೆ ನಡೆಸಿದೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಪಶ್ಚಿಮ ಬಂಗಾಳದ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಸಿಪಿಐ(ಎಂ) ಸದಸ್ಯರು ವೇದಿಕೆಯ ಮೇಲೆ ರಾಮ ಭಜನೆ ಹಾಡುತ್ತಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮವಾದ ಎಕ್ಸ್ (X) ನಲ್ಲಿ ‘@KreatelyMedia’ ಎಂಬ ಹ್ಯಾಂಡಲ್ ನಲ್ಲಿ “ಮತದಾನ ಮುಗಿದ ನಂತರ ಸಿಪಿಐ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದನ್ನು ಹಂಚಿಕೊಂಡಿದೆ. ಅದರಲ್ಲಿ ಕಮ್ಯುನಿಸ್ಟ್ ಪಕ್ಷದ ಸದಸ್ಯರು ವೇದಿಕೆಯ ಮೇಲೆ ರಾಮ ಭಜನೆ ಹಾಡುತ್ತಿರುವಂತೆ ಬಿಂಬಿಸಲಾಗಿದೆ.

ಹಾಗಿದ್ದರೆ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ನಿಜವಾಗಿಯೂ ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಪಕ್ಷದ ಸದಸ್ಯರು ಚುನಾವಣೆ ಬಳಿಕ ಭಜನೆ ಮಾಡುತ್ತಿದ್ದಾರೆ ಎನ್ನಲಾಗುತ್ತಿರುವ ವಿಡಿಯೋ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವಿಡಿಯೋದ ಕೀ ಫ್ರೇಮ್ ಗಳನ್ನು ತೆಗೆದು, ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,

ನವೆಂಬರ್ 19, 2021 ರಂದು ದೀಬ್ಯೇಂದು ದಾಸ್ ಎಂಬುವವರು ಹಂಚಿಕೊಂಡಿದ್ದ ಮೂಲ ವಿಡಿಯೋ ಲಭ್ಯವಾಗಿದೆ. ವಿಡಿಯೋದಲ್ಲಿ ಅಲ್ಲಿನ ಸದಸ್ಯರು ಯಾವುದೇ ಭಜನೆಯನ್ನು ಹಾಡುತ್ತಿಲ್ಲ, ಬದಲಾಗಿ ‘ನೀಲ್ ಗಗನ್ ಪರ್ ಉಡ್ತೇ ಬಾದಲ್‘ ಎಂಬ ಹಾಡನ್ನು ಹಾಡುತ್ತಿದ್ದಾರೆ.

ಈ ವಿಡಿಯೋ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ-1 ಬ್ಲಾಕ್‌ನ ತೆಖಾಲಿ ಮಾರುಕಟ್ಟೆಯಲ್ಲಿ ನಡೆದ ಪ್ರತಿಭಟನಾ ಸಭೆಯದ್ದಾಗಿದೆ. ಮಹಿಳಾ ದೌರ್ಜನ್ಯ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಸಿಪಿಐ(ಎಂ) ಈ ಪ್ರತಿಭಟನೆಯನ್ನು ಆಯೋಜಿಸಿತ್ತು.

ಪಶ್ಚಿಮ ಬಂಗಾಳದ ಸಿಪಿಐ(ಎಂ) ಸದಸ್ಯರು ರಾಮ ಭಜನೆ ಹಾಡುತ್ತಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಎಡಿಟ್ ಮಾಡಲಾಗಿದ್ದು, ಇದು ತಪ್ಪು ಮಾಹಿತಿಯಾಗಿದೆ. ಮೂಲ ವಿಡಿಯೋ ಪ್ರತಿಭಟನಾ ಸಭೆಯ ಸಂದರ್ಭದಲ್ಲಿ ಸಾಮಾನ್ಯ ಹಿಂದಿ ಹಾಡನ್ನು ಹಾಡಿದ್ದದ್ದಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪಶ್ಚಿಮ ಬಂಗಳದಲ್ಲಿ ಇತ್ತೀಚೆಗೆ ಮುಕ್ತಾಯವಾದ ಚುನಾವಣೆಯ ಬಳಿಕ ಸಿಪಿಐ(ಎಂ) ಪಕ್ಷದ ಸದಸ್ಯರು ರಾಮ ಭಜನೆ ಮಾಡುತ್ತಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಳೆಯ ವಿಡಿಯೋವನ್ನತಪ್ಪಾಗಿ ಹಂಚಿಕೊಳ್ಳುತ್ತಿದ್ದಾರೆ.


ಇದನ್ನು ಓದಿರಿ : FACT CHECK : ಬಿಜೆಪಿ ರ್‍ಯಾಲಿಯ ಟ್ರಾಫಿಕ್ ವಿರುದ್ಧ ಕಿಡಿಕಾರಿದ ಮಹಿಳೆಯ ಮೇಲೆ FIR ದಾಖಲಾಗಿದೆಯೇ?


ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights