ಭಾರಿ ಮಳೆ : ಬೈಕ್ ಸಮೇತ ಸವಾರ ನೀರು ಪಾಲು – ವಿಡಿಯೋ ವೈರಲ್
ನಿನ್ನೆ ರಾತ್ರಿ ವಿಜಯಪುರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಸೇತುವೆ ಮೇಲೆ ದಾಟುತ್ತಿದ್ದ ಬೈಕ್ ಸವಾರ ನೀರು ಪಾಲಾದ ಘಟನೆ ದ್ಯಾಬೇರಿ-ಜಂಬಗಿ ರಸ್ತೆಯಲ್ಲಿರುವ ಹಳ್ಳದ ಸೇತುವೆ ಮೇಲೆ ನಡೆದಿದೆ.
ಇಂದು ಬೆಳಿಗ್ಗೆ ನಡೆದ ಘಟನೆ ಇದಾಗಿದ್ದು, ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋದ ಬೈಕ್ ಸವಾರನ ಬಗ್ಗೆ ಸಿಗದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ ಆತ ನೀರಿನಲ್ಲಿ ಕೊಚ್ಚಿಕೊಂಡು ಹೋದ ವಿಡಿಯೋ ಮಾತ್ರ ವೈರಲ್ ಆಗಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.