ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿ ವಿಷ ಸೇವಿಸಿ ಯುವಕ ಆತ್ಮಹತ್ಯೆ….!

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಕಳ್ಳಿ ಲಿಂಗಸುಗೂರಿನ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲರನ್ನ ತಲ್ಲಣಗೊಳಿಸಿದೆ.

ಹೌದು..  ತಾಲ್ಲೂಕಿನ ಕರಡಕಲ್ ನಿವಾಸಿ ಅಮರೇಶ್ ನೆಲಹಾಳ ಆತ್ಮಹತ್ಯೆ ಮಾಡಿಕೊಂಡ ಯುವಕ. ನನ್ಮ ಸಾವಿಗೆ ಈಶ್ವರ ಆಗ್ರೋ ಟ್ರೇಡರ್ಸ್ ಮಾಲೀಕ ಅಮರೇಗೌಡ ಕಾರಣ ಎಂದು ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈಶ್ವರ ಟ್ರೇಡರ್ಸ್ ನಲ್ಲಿ ಕೆಲಸ ಮಾಡ್ತಿದ್ದ ಮೃತ ಅಮರೇಶ್ ಅವರ ಪಪ್ಪಾಯ ತೋಟದಲ್ಲಿ ಕ್ರೀಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಲಿಂಗಸುಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights