ಮಂಗಳೂರು ಗೋಲಿಬಾರ್ ಗೆ ಮಡಿಕೇರಿಯಲ್ಲಿ ಆಕ್ರೋಶ : ಮುಸ್ಲಿಂ ಸಮುದಾಯದ ಅಂಗಡಿಗಳು ಬಂದ್

ಎನ್‍ಆರ್‍ಸಿ ಸಿ ಮತ್ತು ಸಿಎಎ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಗೆ ಕೊಡಗು ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಮಂಗಳೂರಿನಲ್ಲಿ ನಡೆದ ಇಬ್ಬರ ಗೋಲಿಬಾರ್ ಗೆ ಇಂದು ಕೂಡ ಮಡಿಕೇರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಡಿಕೇರಿಯ ಮಾರುಕಟ್ಟೆ, ಇಂದಿರಾಗಾಂಧಿ ವೃತ್ತ ಮತ್ತು ಮಹದೇವಪೇಟೆ ಸೇರಿದಂತೆ ನಗರದ ವಿವಿಧೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

ಬೆಳಿಗ್ಗೆ ಆರು ಗಂಟೆಯಿಂದಲೇ ಅಂಗಡಿಗಳನ್ನು ತೆರೆಯದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜೆ ಆರು ಗಂಟೆಯವರೆಗೆ ಮುಸ್ಲಿಂ ಸಮುದಾಯದ ವ್ಯಾಪಾರಿಗಳು ಮುಚ್ಚಿದ್ದು, ಪರಿಣಾಮ ಮಡಿಕೇರಿಯ ರಸ್ತೆಗಳಲ್ಲಿ ಜನಗಳ ಓಡಾಟ ಕಡಿಮೆಯಾಗಿದೆ.

ಮುಸ್ಲಿಂ ಸಮುದಾಯದ ವ್ಯಾಪಾರಸ್ಥರು ಮಾತ್ರವೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು, ಉಳಿದಂತೆ ಬೇರೆ ಸಮುದಾಯದ ವ್ಯಾಪಾರಸ್ಥರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಹೀಗಾಗಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights