ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ : ಇಂದು-ನಾಳೆ ಶಾಲಾ ಮಕ್ಕಳಿಗೆ ಬಿಸಿಯೂಟ ಬಂದ್

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಯಲಿದ್ದು, ಇಂದು ಮತ್ತು ನಾಳೆ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗುವುದಿಲ್ಲ.

ಹೌದು, ಬಿಸಿಯೂಟ ಕಾರ್ಯಕರ್ತರು ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಂಡಿದ್ದು, ಎರಡು ದಿನ ಶಾಲೆಗಳಲ್ಲಿ ಬಿಸಿಯೂಟ ತಯಾರಸದೇ ಇರಲು ನಿರ್ಧರಿಸಿದ್ದಾರೆ. ಹೀಗಾಗಿ ಶಾಲಾ ಮಕ್ಕಳಿಗೆ ಎರಡು ದಿನ ಬಿಸಿಯೂಟ ಇರುವುದಿಲ್ಲ.

ಕನಿಷ್ಠ ವೇತನ ಜಾರಿ, ಕೆಲಸದ ಭದ್ರತೆ, ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ನೀಡಬಾರದು, ತಮ್ಮನ್ನು ಕಾರ್ಮಿಕ ಕಾಯ್ದೆಯಡಿ ಸೇರಿಸಬೇಕೆಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ಎರಡು ದಿನಗಳ ಕಾಲ ಹೋರಾಟ ಕೈಗೊಳ್ಳಲಾಗಿದೆ. ಈಗಾಗಲೇ ನಗರದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಬಿಸಿಯೂಟ ಕಾರ್ಯಕರ್ತೆಯರು ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣದಲ್ಲಿ ಸ್ವಾತಂತ್ರ್ಯ ಉದ್ಯಾನದ ಕಡೆಗೆ ತೆರಳಲಿದ್ದಾರೆ. ಕನಿಷ್ಠವೇತನ, ಕೆಲಸದ ಭದ್ರತೆ, ಪ್ರತಿ ತಿಂಗಳು ಐದನೇ ತಾರೀಖು ಸಂಬಂಳ ನೀಡುವುದು, ಸಂಬಂಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಒಂದು ಲಕ್ಷ ಹದಿನೆಂಟು ಸಾವಿರ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights