ಪಾಕ್ ಪರ ಘೋಷಣೆ ಪ್ರಕರಣ : ಆರೋಪಿಗಳ ಮೇಲೆ ಚಪ್ಪಲಿ, ಶೂ ಎಸೆದು ಆಕ್ರೋಶ

ಪುಲ್ವಾಮಾ ವರ್ಷಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಿಗಳ ಮೇಲೆ ಸಾರ್ವಜನಿಕರು ಚಪ್ಪಲಿ ಹಾಗೂ ಶೂ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಾಶ್ಮೀರದ ಅಮೀರ್, ಬಾಸಿತ್, ತಾಲಿಬ್ ಎನ್ನುವ 3 ವಿದ್ಯಾರ್ಥಿಗಳನ್ನು ಇಂದು ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ದೇಶದ್ರೋಹಿಗಳಿಗೆ ಮಾರ್ಚ್ 2 ರವರೆಗೆ ನ್ಯಾಯಾಂಗ ಬಂಧನ ಕೋರ್ಟ್ ವಿಧಿಸಿದೆ. ಕೋರ್ಟ್ ತೀರ್ಪಿನ ಬಳಿಕ ಹೊರ ಬಂದ ಆರೋಪಿಗಳ ಮೇಲೆ ಹಲ್ಲೆ ಮಾಡಲಾಗಿದೆ.

ಹುಬ್ಬಳ್ಳಿ ಜೆಎಂಎಫ್ ಸಿ ಕೋರ್ಟ್ ಆವರಣದಲ್ಲಿ ಸೇರಿದ ಸಾರ್ವಜನಿಕರು ಆರೋಪಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಹುಬ್ಬಳ್ಳಿ ಕೋರ್ಟ್ ಎದುರು ಎಬಿವಿಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡುವಂತೆ ಒತ್ತಾಯ ಮಾಡಲಾಗುತ್ತಿದೆ.  ಪ್ರತಿಭಟನೆಯಲ್ಲಿ ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights