ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ : ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ
ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿಯೇ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 13ರಲ್ಲಿ ನಡೆದಿದೆ.
ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತುಕೊಂಡಿದೆ. ಜೀವ ಭಯದಲ್ಲಿ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸಲಾಗುತ್ತಿತ್ತು. ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆಯಿಂದ ಜನ ಭಯಭೀತಗೊಂಡರು. ಜೊತೆಗೆ ಎರಡೂ ಬದಿಯ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ರಸ್ತೆ ಮೇಲೆಯೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ರಸ್ತೆ ದಾಟಲಾಗದೆ ನಿಂತಿರುವ ಇತರೆ ವಾಹನಗಳು ರಸ್ತೆಯಲ್ಲೇ ನಿಂತುಕೊಂಡಿವೆ. ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.


