ದೆಹಲಿಯಲ್ಲಿ ಮತ್ತೆ ಹಿಂಸಾಚಾರ : ಮೃತರ ಸಂಖ್ಯೆ 7ಕ್ಕೇ ಏರಿಕೆ – 50 ಕ್ಕೂ ಹೆಚ್ಚು ಜನರಿಗೆ ಗಾಯ
ದೆಹಲಿಯಲ್ಲಿ ಮತ್ತೆ ಹಿಂಸಾಚಾರ ಆರಂಭಗೊಂಡಿದ್ದು ಮೃತಪಟ್ಟವರ ಸಂಖ್ಯೆ 7 ಕ್ಕೇ ಏರಿಕೆಯಾಗಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಹೌದು… ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ವಿರೋಧಿಸಿ ದೆಹಲಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಡೆದಿದೆ. ಎರಡು ಗುಂಪುಗಳ ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಹೆಡ್ ಕಾನ್ಸ್ ಟೇಬಲ್ ರತನ್ ಲಾಲ್ (42) ಸೇರಿ ನಾಲ್ವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸದ್ಯ ಈಶಾನ್ಯ ದೆಹಲಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಭಾಗದಲ್ಲಿ ಕೆಲ ಮನೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಸದ್ಯ ಘಟನಾ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

