ಕೊರೊನ ಸೋಂಕಿತ ವ್ಯಕ್ತಿ ದೆಹಲಿ ಆಸ್ಪತ್ರೆ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಶಂಕಿತ ಕರೊನ ವೈರಸ್ ಸೋಂಕಿತ 35 ವರ್ಷದ ವ್ಯಕ್ತಿ  ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಪಂಜಾಬ್ ಮೂಲದ ಈ ವ್ಯಕ್ತಿ ಕಳೆದ ಒಂದು ವರ್ಷದಿಂದ ಸಿಡ್ನಿ ನಿವಾಸಿಯಾಗಿದ್ದರು. ಅವರು ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಆಗಮಿಸಿದ್ದರು.

ಕರೋನವೈರಸ್ ಶಂಕಿತನಾದ ಕಾರಣ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಇದಾದ ನಂತರ ಸ್ವಲ್ಪ ಹೊತ್ತಿನಲ್ಲಿತೆ ಏಳನೇ ಮಹಡಿಯಿಂದ ಜ್ತಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ಬಗ್ಗೆ ನೋಡಲ್ ಅಧಿಕಾರಿ ನಮಗೆ ಮಾಹಿತಿ ನೀಡಿದ್ದಾರೆ. ಅವರನ್ನು ಬುಧವಾರ ರಾತ್ರಿ 9 ಗಂಟೆಗೆ ದಾಖಲಿಸಲಾಗಿದೆ. ಅಂದೇ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ ಈ ವ್ಯಕ್ತಿ ಪಂಜಾಬ್ ಮೂಲದವನು ಮತ್ತು ಅವನು ಕಳೆದ ಒಂದು ವರ್ಷದಿಂದ ಸಿಡ್ನಿಯಲ್ಲಿ ವಾಸಿಸುತ್ತಿದ್ದನೆಂದು ತಿಳಿದುಬಂದಿದೆ. ಅವರು ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು” ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights