ಕೊರೊನಾ: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 160 ದಾಟಿದೆ. ಇದು ಜನರಲ್ಲಿ ಮತ್ತಷ್ಟು ಭೀತಿಯನ್ನು ಸೃಷ್ಟಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕೊರೊನಾ ವೈರಸ್‌ನಿಂದಾಗಿ ದೇಶದಲ್ಲಿ ಉಂಟಾಗಿರುವ ಪರಿಸ್ಥಿತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಕುರಿತಾಗಿ ದೇಶವಾಸಿಗಳೊಂದಿಗೆ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಬುಧವಾರ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ 8 ಗಂಟೆಗೆ ಕೋವಿಡ್ -19 ಸಂಬಂಧಿತ ಸಮಸ್ಯೆಗಳು ಹಾಗೂ ಅದರ ನಿಯಂತ್ರಣಕ್ಕಾಗಿ ನಡೆಸಲಾಗುತ್ತಿರುವ ಪ್ರಯತ್ನಗಳ ಕುರಿತಾಗಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಭೆ ಕೋವಿಡ್ -19 ನಿಯಂತ್ರಣಕ್ಕಾಗಿ ನಡೆಸಲಾಗುತ್ತಿರುವ ಪ್ರಯತ್ನಗಳ ಪರಾಮರ್ಶನೆ ನಡೆಸಿದ್ದು, ಭಾರತವನ್ನು ಸದೃಢತೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತಂತೆ ಚರ್ಚಿಸಲಾಯಿತು  ಎಂದು ಮತ್ತೊಂದು ಟ್ವೀಟ್ ನಲ್ಲಿ ಹೇಳಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights