ಕೊರೊನಾ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ಮೀಸಲಿಡಿ: ಸೋನಿಯಾ ಗಾಂಧಿ ಆಗ್ರಹ

ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂತಹ ವಿಷಮ ಸ್ಥಿತಿಯಲ್ಲಿ ಜನ ಆತಂಕಕ್ಕೀಡಾಗಬಾರದು ಮತ್ತು ದೇಶವೂ ತಲೆಬಾಗಬಾರದು ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

ಕೋವಿಡ್​​​-19 ವೈರಾಣು ತಡೆಗೆ ಕೆಲವು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿವೆ. ಈ ಮಾರಕ ಸೋಂಕು ದೃಢಪಟ್ಟಿರುವ ಸೋಂಕಿತರನ್ನು ಪಾರು ಮಾಡಲು ಕೇಂದ್ರ ಸರ್ಕಾರವು ಪರಿಹಾರ ಪ್ಯಾಕೇಜ್​​ ಘೋಷಣೆ ಮಾಡಬೇಕು. ದೇಶಾದ್ಯಂತ ಕೊರೋನಾ ವೈರಸ್ ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಿ ಮುಂಜಾಗೃತ ಕ್ರಮಕೈಗೊಳ್ಳಬೇಕು ಎಂದು ಸೋನಿಯಾ ಗಾಂಧಿ ಯವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

Equally alarming are reports that there is artificial shortages & black marketing of hand sanitizers, face masks & even…

Posted by Indian National Congress on Sunday, March 22, 2020

ಮಾರುಕಟ್ಟೆಯಲ್ಲಿ ನಕಲಿ ಸ್ಯಾನಿಟೈಸರ್​​ಗಳು, ಮಾಸ್ಕ್, ದ್ರವ ಸೋಪುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್​ಗೆ 2ನೇ ವ್ಯಕ್ತಿ ಸಾವನ್ನಪ್ಪಿದ್ದು, ಬಿಹಾರದಲ್ಲಿಯೂ ಓರ್ವ ಸಾವನ್ನ್ಪಪಿದ್ದಾರೆ. ಈ ಮೂಲಕ ಭಾರತದಲ್ಲಿ ಕೋವಿಡ್​-19ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಮೂಲದ 63 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಮಾ. 1ರಂದು ಕೊರೋನಾ ಶಂಕೆಯಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದ  ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮಾ. 21ರ ರಾತ್ರಿ 11 ಗಂಟೆಗೆ ಸಾವನ್ನಪ್ಪಿದ್ದಾರೆ. ಡಯಾಬಿಟಿಸ್, ಅಧಿಕ ರಕ್ತದೊತ್ತಡವಿದ್ದ ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಭಾರತದಲ್ಲಿ ಸಾವಿನ ಸಂಖ್ಯೆ 6 ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕರ್ನಾಟಕದ ಕಲಬುರ್ಗಿಯಲ್ಲಿ ಮೊದಲ ವ್ಯಕ್ತಿ ಕೊರೋನಾ ವೈರಸ್​ಗೆ ಬಲಿಯಾಗಿದ್ದರು. ನಂತರ ದೆಹಲಿ, ಮುಂಬೈನಲ್ಲಿ ಸಾವಿನ ಪ್ರಕರಣ ದಾಖಲಾಗಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights