ಒಂದೇ ದಿನಕ್ಕೆ ರಾಜ್ಯದಲ್ಲಿ 4 ಸೋಂಕಿತರು ಪತ್ತೆ : ಮಣಿಪಾಲದ ಕೆಎಂಸಿ ಆಸ್ಪತ್ರೆಯ ಒಪಿಡಿ ಬಂದ್
ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಭೀತಿ ದಿನದಿಂದ ದಿನಕ್ಕೆ ಹೆಚ್ಚು ಆತಂಕವನ್ನು ಹೆಚ್ಚಿಸುತ್ತಿದೆ. ಕಾರಣ ನೆನ್ನೆ ಒಂದೇ ದಿನಕ್ಕೆ ರಾಜ್ಯದಲ್ಲಿ ನಾಲ್ಕು ಜನರಿಗೆ ಕೊರೊನಾ ಸೋಂಕು ಹರಡಿದೆ. ಪರಿಣಾಮ 51 ಇದ್ದ ಸೋಂಕಿತರ ಸಂಖ್ಯೆ ಈಗ 55ಕ್ಕೇರಿಕೆಯಾಗಿದೆ.
ವಿವಿಧ ರಾಜ್ಯಗಳಲ್ಲಿ ನಿತ್ಯವೂ ಸೋಂಕಿತರ ಸಂಖ್ಯೆ ಏರುವುದನ್ನು ಗಮನಿಸಿದರೆ ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ಕಾಲಿಟ್ಟಿದೇಯಾ ಎಂಬ ಅನುಮಾನ ಮೂಡಲು ಶುರುವಾಗಿದೆ. ಕರ್ನಾಟಕ, ತೆಲಂಗಾಣ ಮತ್ತು ದೆಹಲಿಯಲ್ಲಿ ಗುರುವಾರ ತಲಾ 4 ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕೊರೊನಾ ಥರ್ಡ್ ಸ್ಟೇಜ್ಗೆ ಲಗ್ಗೆ ಇಟ್ಟಿದೇಯಾ? ಸಮುದಾಯಕ್ಕೆ ಕೊರೊನಾ ಹಬ್ಬುತಿದೇಯಾ ಎಂಬ ಅನುಮಾನಕ್ಕೆ ಕಾರಣ ಆಗಿದೆ.
ಇನ್ನೂ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿದೆ. ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಸೋಂಕಿತನನ್ನು ಕೆಎಂಸಿಗೆ ರವಾನಿಸಿದ್ದು, ಕೆಎಂಸಿ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ.

