ರಾಜ್ಯದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ : ಗೌರಿಬಿದನೂರಿನಲ್ಲಿ ಹೊಸದಾಗಿ 5 ಮಂದಿಗೆ ಸೋಂಕು!

ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವ ಕೊರೊನಾ ಸೋಂಕು ಗೌರಿಬಿದನೂರಿನಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹೇಳುವ ಪ್ರಕಾರ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಆರಂಭದಲ್ಲಿ ನಾಲ್ಕು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದರೆ ಇವತ್ತಿಗೆ ಒಟ್ಟು 9 ಪಾಸಿಟಿವ ಪ್ರಕರಣಗಳು ದಾಖಲಾಗಿವೆ. ಗೌರಿಬಿದನೂರಿನಲ್ಲಿ ಮೊದಲು ಮೆಕ್ಕಾದಿಂದ ವಾಪಸ್ಸಾಗಿದ್ದ 31 ವರ್ಷದ ವ್ಯಕ್ತಿಗೆ ಸೋಂಕು ತಗುಲಿತ್ತು. ನಂತರ ಈ ವ್ಯಕ್ತಿಯ ತಾಯಿ ಮತ್ತು ಚಿಕ್ಕಮ್ಮನಿಗೆ ತಗುಲಿದೆ. ಇಷ್ಟಕ್ಕೇ ತೃಪ್ತಿ ಪಡದ ವೈರಸ್ ಸದ್ಯ 31 ವರ್ಷದ ವ್ಯಕ್ತಿಯ ತಂದೆಗೂ ಹರಡಿಕೊಂಡಿದೆ.

ಇನ್ನೂ  ಗೌರಿಬಿದನೂರಿನಲ್ಲಿ ಮೆಕ್ಕಾದಿಂದ ವಾಪಸ್ಸಾಗಿದ್ದ ಮಹಿಳೆ ಕೊರೊನಾಗೆ ಬಲಿಯಾಗಿದ್ದರು.ಇಷ್ಟು ಮಾತ್ರವಲ್ಲದೇ ಈಗ ಮೃತ ಮಹಿಳೆಯ ಮಗ ಹಾಗೂ ಸೊಸೆ,  ಅವರ ಮೊಮ್ಮಗ ಸೇರಿದಮಥೆ ಸೊಸೆಯ ತಮ್ಮನಿಗೂ ಕೊರೊನಾ ಸೋಂಕು ಹರಡಿದೆ. ಹಿಂದಿನ ನಾಲ್ಕು ಪ್ರಕರಣದ ಜೊತೆಗೆ ಇಂದು ಹೊಸದಾಗಿ ಐದು ಪ್ರಕರಣಗಳು  ಸೇರಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮತ್ತೊಂದು ಭಯಾನಕ ಸಂಗತಿ ಎಂದರೆ 31 ವರ್ಷದ ವ್ಯಕ್ತಿಯ ಸಹೋದರಿಯರಿಗೂ ಸೋಂಕು ತಗಿಲಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಅವರಿಬ್ಬರ ಅಂತಿಮ ವರದಿಗಾಗಿ ಕಾಯುತ್ತಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈಗಾಗಲೇ ಹೊಸದಾಗಿ ಇಂದು ದೃಢಪಟ್ಟಿರುವ 05 ಮಂದಿ ಸೇರಿದಂತೆ ಶಂಕಿತ ಇಬ್ಬರನ್ನೂ ಸಹ ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿಯೇ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಮಹಾಮಾರಿ ಕೊರೊನಾದಿಂದ ಮುಕ್ತಿ ಸಿಗುತ್ತೋ ಅಂತ ಇಡೀ ವಿಶ್ವವೇ ಎದುರು ನೋಡುತ್ತಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights