Lock down effect : SSLOC, PUC ನಂತರ CET ಪರೀಕ್ಷೆಯೂ ಮುಂದಕ್ಕೆ….
ಕೊರೋನಾ ಕದನದ ಅಂಗವಾಗಿ ಲಾಗೂವಾಗಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಬೇಕಿದ್ದ cet ಪರೀಕ್ಷೆಗಳನ್ನು ಮುಂದೂಡಲಾಗಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಗಳು ಇನ್ನೂ ಪೂರ್ಣ ವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಅವರು ಈ ತೀರ್ಮಾನವನ್ನು ಪ್ರಕಟಿಸಿದರು.
ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದ 27ರಂದು ಆರಂಭವಾಗಬೇಕಿದ್ದ sslc ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪಿಯುಸಿಯ ಒಂದು ಪ್ರಶ್ನೆ ಪತ್ರಿಕೆ ಸಹ ಬಾಕಿ ಉಳಿದಿದೆ.
ಕೊರೋನಾ ಮಾರಿಯ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಏಪ್ರಿಲ್ 14ರವರೆಗೆ ಇಡೀ ದೇಶದಲ್ಲಿ ಲಾಕ್ಡೌನ್ ಜಾರಿಗೆ ತಂದಿದ್ದಾರೆ.

ರಾಜ್ಯದಲ್ಲಿ ಒಂದರಿಮದ ಆರನೇ ತರಗತಿವರೆಗೆ ಪರೀಕ್ಷೆಗಳನ್ನು ರದ್ದು ಪಡಿಸಲಾಗಿದ್ದು ಏಳರಿಂದ ಒಂಬತ್ತನೇ ತರಗತಿ ಪರೀಕ್ಷೆಗಳ ಬಗ್ಗೆ ಇನ್ನೂ ತೀರ್ಮಾನ ಕೈಗೊಳ್ಳಬೇಕಿದೆ.

