ಭಾರತದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 109ಕ್ಕೆ ಏರಿಕೆ: 4,000 ಸೋಂಕಿತರು

ಕೊರೋನಾ ಸೋಂಕಿ  ಆಕ್ರಮಣಕ್ಕೆ ಭಾರತದಲ್ಲಿ ಬಲಿಯಾದವರ ಸಂಖ್ಯೆ ಇಂದು 109ಕ್ಕೆ  ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ 4,047 ಕ್ಕೆ ಏರಿಕೆಆಗಿದ್ದು, ಕಳೆದ 24 ಗಂಟೆಗಳಲ್ಲಿ 505 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದುವರೆಗೆ ಭಾರತದಲ್ಲಿ ಕೆಲವರು ಗುಣಮುಖರಾಗಿದ್ದು, ಇನ್ನು ಕೆಲವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 291 ಆಗಿದೆ. ಒಬ್ಬರು ವಲಸೆ ಹೋಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ನಾಲ್ಕೈದು ಬಾರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದ ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಇಂದು ಲಕ್ನೊದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 6ನೇ ಬಾರಿ ಪರೀಕ್ಷೆಯಲ್ಲಿ ಅವರಲ್ಲಿ ನೆಗೆಟಿವ್ ಬಂದಿತ್ತು.

ಜಾರ್ಖಂಡ್ ನ ರಾಂಚಿಯಲ್ಲಿ ಮತ್ತೊಂದು ಕೊರೋನಾ ಸೋಂಕಿತ ಪ್ರಕರಣ ವರದಿಯಾಗಿದೆ. ಅವರು ಮಲೇಷಿಯಾದ ಸೋಂಕಿತ ಮಹಿಳೆ ಜೊತೆ ನೇರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಜಾರ್ಖಂಡ್ ನಲ್ಲಿ ಒಟ್ಟು ನಾಲ್ಕು ಕೊರೋನಾ ಸೋಂಕಿತ ಕೇಸುಗಳು ವರದಿಯಾಗಿವೆ.

https://twitter.com/ANINewsUP/status/1247018130997575680

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights