ಬಡವರಿಗೆ ಊಟ ಕೊಡಿ, ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ತಿಂಡಿ, ಊಟ ನೀಡುವುದನ್ನು ಸರ್ಕಾರ ಸ್ಥಗಿಸಿಗೊಳಿಸಿದ್ದು, ದುಡ್ಡುಕೊಟ್ಟವರಿಗಷ್ಟೇ ಊಟ ವೆಂದು ಘೋಷಿಸಿದೆ. ಸರ್ಕಾರದ ಈ ನಡೆಯನ್ನು ವಿರೋಧಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಯಡಿಯೂರಪ್ಪನವರುಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಇಂದು ಮಾತುಕತೆ ನಡೆಸಿದರು.

ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತವಾಗಿ ಊಟ, ತಿಂಡಿ ನೀಡಲಾಗುತ್ತಿತ್ತು. ಆದರೆ ದುರುಪಯೋಗವಾದ ಕಾರಣ ದರ ನಿಗದಿ ಮಾಡಿರುವುದಾಗಿ ಯಡಿಯೂರಪ್ಪನವರು ತಿಳಿಸಿದ್ದಾರೆ.

ಹಣ ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ. ಬಡವರಿಗೆ ಊಟ, ತಿಂಡಿಯನ್ನು ಇಂದಿರಾ ಕ್ಯಾಂಟೀನ್ ಮೂಲಕ ಉಚಿತವಾಗಿ ನೀಡಿ. ದುರುಪಯೋಗದ ನೆಪವೊಡ್ಡಿ ಬಡವರ ಹೊಟ್ಟೆಗೆ ಆಹಾರವಿಲ್ಲದಂತೆ ಮಾಡಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಪರಿಶೀಲನೆ ನಡೆಸುವುದಾಗಿ ಯಡಿಯೂರಪ್ಪ ಅವರು ಮಾತುಕತೆ ವೇಳೆ ಸಿದ್ದರಾಮಯ್ಯ ಅವರಿಗೆ ತಿಳಿಸಿದರು.

ಲಾಕ್ ಡೌನ್ ನಿಂದ ರೈತರು, ಕೃಷಿ ಕೂಲಿ ಕಾರ್ಮಿಕರು, ಜತೆಗೆ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಒತ್ತಾಯಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಪ್ರತಿಪಕ್ಷಗಳ ಸಲಹೆ, ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights