ರಾಜ್ಯದಲ್ಲಿ ಹೊಸದಾಗಿ 12 ಜನರಲ್ಲಿ ಕೊರೊನಾ ಪತ್ತೆ : ಸೋಂಕಿತರ ಸಂಖ್ಯೆ 175ಕ್ಕೇರಿಕೆ..!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರು  ಹೆಚ್ಛಾಗುತ್ತಿದ್ದು ಇಂದು ಹೊಸದಾಗಿ 12 ಪ್ರಕರಣಗಳು ಪತ್ತೆಯಾಗಿದ್ದು, ಅವರಲ್ಲಿ 7 ಮಂದಿ ದೆಹಲಿಯ ನಿಜಾಮುದ್ದೀನ್ ಜಮಾತ್​ ಸಭೆಯ ನಂಟು ಹೊಂದಿದವರಾಗಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮೂರು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 175ಕ್ಕೇರಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.

ಬಾಗಲಕೋಟೆ, ಮಂಡ್ಯ, ಗದಗ, ಬೆಂಗಳೂರು ಮತ್ತು ಕಲಬುರ್ಗಿಯಲ್ಲಿ ಇಂದು ಒಟ್ಟು 12 ಕೊರೋನಾ ಪ್ರಕರಣಗಳು ಕಂಡು ಬಂದಿವೆ.ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ನಿಜಾಮುದ್ದೀನ್‍ಗೆ ಹೋಗಿ ಬಂದವರ ಸಂಪರ್ಕದಲ್ಲಿರುವವರಿಗೆ ಕೊರೊನಾ ಸೋಂಕು ತಗಲಿದ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ನಿಜಾಮುದ್ದೀನ್‍ಗೆ ಹೋಗಿ ಬಂದವರು ಸರಿಯಾಗಿ ಕ್ವಾರಂಟೈನ್ ಆಗದ ಪರಿಣಾಮ ಈಗ ಅವರ ಜೊತೆ ಸಂಪರ್ಕದಲ್ಲಿದ್ದವರಿಗೂ ಕೊರೊನಾ ಭೀತಿ ಉಂಟಾಗಿದೆ.

ದೇಶದಲ್ಲಿ 354 ಜನರಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್ ಸೋಂಕು (ಕೋವಿಡ್-19) ತಗುಲಿರುವುದು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ದೇಶದಲ್ಲಿ 4,421ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 325 ಮಂದಿ ಗುಣಮುಖರಾಗಿದ್ದು, 114 ಜನ ಮೃತಪಟ್ಟಿದ್ದಾರೆ. ಇಂದಿನ ವರದಿಗಳನ್ನು ಪರಿಗಣನೆಗೆ ತೆಗೆದುಕೊಂಡರೆ ಸೋಂಕಿತರ ಸಂಖ್ಯೆ ಇನ್ನೂ ಅಧಿಕವಾಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights