ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಿದೆ – ಟ್ರಂಪ್ ಗಂಭೀರ ಆರೋಪ!
ದಿನೇ ದಿನೇ ಜಗತ್ತಿನಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು ವಿಶ್ವದ ದೊಡ್ಡಣ್ಣ ತಾಳ್ಮೆ ಕಳೆದುಕೊಳ್ಳುತ್ತಿದ್ದಾನೆ. ಬೇರೆ ದೇಶಗಳ ಮೇಲೆ ತನ್ನ ಕೋಪ ತೋರಿಸಿಕೊಳ್ಳುತ್ತಿದ್ದಾರೆ.
ಮಾರಣಾಂತಿಕ ಕೋವಿಡ್ 19 ವೈರಸ್ ಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಮತ್ತೆ ವಾಗ್ದಾಳಿಯನ್ನು ಮುಂದುವರಿಸಿದ್ದು, ಚೀನಾ ಬಳಿಕ ಇದೀಗ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮೊದಲೇ ಎಚ್ಚರಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.
ಭಾರತದ ಬಳಿ ಹೈಡ್ರಾಕ್ಸಿಕ್ಲೋರೋಕ್ವಿನ್ (ಮಲೇರಿಯಾ ತಡೆ ಔಷಧ) ಔಷಧಕ್ಕಾಗಿ ಬೇಡಿಕೆಯಿಟ್ಟಿದ್ದ ಟ್ರಂಪ್, ಮನವಿ ತಿರಸ್ಕರಿಸಿದರೆ ಪ್ರತೀಕಾರ ಎಂದು ಎಚ್ಚರಿಕೆ ನೀಡಿದ್ದಾರೆ. ಅದಕ್ಕೂ ಮುಂಚೆ ವೈರಸ್ ಹರಡಿಸಿದ ಕಾರಣಕ್ಕಾ ಚೀನಾ ವಿರುದ್ಧ ಮುಗಿಬಿದ್ದಿದ್ದರು.
ಇದೀಗ, ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ತಿರುಗಿ ಬಿದ್ದಿದ್ದಾರೆ. ಶ್ವೇತ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚೀನಾ ವಿಚಾರದಲ್ಲಿ ಡಬ್ಲ್ಯೂಎಚ್ಒ ಸಂಸ್ಥೆ ಪಕ್ಷಪಾತ ಮಾಡುತ್ತಿದೆ, ಕೊರೊನಾ ವೈರಸ್ ಜಗತ್ತಿಗೆ ಹರಡಿಸಿರುವ ಚೀನಾದ ಬೆನ್ನಿಗೆ ನಿಂತಿದೆ ಎಂದು ಆರೋಪಿಸಿರುವ ಟ್ರಂಪ್, ‘ಅಮೆರಿಕದಿಂದ WHOಗೆ ನೀಡಲಾಗುತ್ತಿರುವ ದೇಣಿಗೆಯನ್ನು ರದ್ದು ಮಾಡುತ್ತೇನೆ’ ಎಂದು ವಾರ್ನಿಂಗ್ ಮಾಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ಹಣವನ್ನು ತಡೆ ಹಿಡಿಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಜಾಗತಿಕವಾಗಿ ವಿಶ್ವ ಆರೋಗ್ಯ ಸಂಸ್ಥೆಗೆ ಅಧಿಕ ಪ್ರಮಾಣದಲ್ಲಿ ಆರ್ಥಿಕ ನೆರವನ್ನು ನೀಡುವ ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿದೆ. ಹೀಗಾಗಿ ಕೋವಿಡ್ 19 ವೈರಸ್ ಬಗ್ಗೆ ಸುಳಿವು ಬಿಟ್ಟು ಕೊಟ್ಟಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ನಾವು ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ಹಣವನ್ನು ತಡೆ ಹಿಡಿಯುತ್ತೇವೆ. ನಾವು ಏನಾಗುತ್ತದೆ ಅಂತ ನೋಡುತ್ತೇವೆ ಎಂದು ಹೇಳಿದರು.

