ವಿದ್ಯಾರ್ಥಿಗಳಿಗೆ ಆಲ್‌ಲೈನ್‌ ತರಗತಿ ನೀಡಲು HRD ಚಿಂತನೆ

ದೇಶದಾದ್ಯಂತ ಲಾಕ್​ಡೌನ್​ ಜಾರಿ ಇರುವುದರಿಂದಾಗಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಹಾಗಾಗಿ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು (HRD) ಚಿಂತನೆ ನಡೆಸಿದೆ.

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸಚಿವಾಲಯವು, ಅಭ್ಯಾಸ ಪರಿಕರಗಳ(ಸ್ಟಡಿ ಮೆಟೀರಿಯಲ್) ಜೊತೆಗೆ ವೆಬ್​ ಪೋರ್ಟಲ್​ನ್ನು ಬಿಡುಗಡೆ ಮಾಡುತ್ತಿದೆ. ಇ-ಲರ್ನಿಂಗ್(ಇ-ಕಲಿಕೆ) ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರೆಸಬಹುದಾಗಿದೆ.

ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಚರ್ಚೆ ನಡೆಸುವಾಗ ವಿದ್ಯಾರ್ಥಿಗಳಿಗೆ ಆನ್​ಲೈನ್​ ತರಗತಿ ಪ್ರಾರಂಭಿಸುವ ಚಿಂತನೆ ಬಂದಿತು. ಸಚಿವಾಲಯವು ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶಾದ್ಯಂತ ಮಾರ್ಚ್​ 25ರಂದು ಲಾಕ್​ಡೌನ್ ಜಾರಿಯಾಗಿದೆ. ಹೀಗಾಗಿ ಸಚಿವಾಲಯವು ವಿದ್ಯಾರ್ಥಿಗಳಿಗೆ ತನ್ನದೇಯಾದ ಇ-ಪಾಠಶಾಲಾ ಎಂಬ ವೆಬ್​ ಪೋರ್ಟಲ್​ ಆರಂಭಿಸಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ರಾಜ್ಯಗಳ ಜೊತೆ ಚರ್ಚೆ ನಡೆಸಲು ಚಿಂತನೆ ನಡೆಸಿದೆ. ಅಂದರೆ ಶೈಕ್ಷಣಿಕ ಕ್ಯಾಲೆಂಡರ್, ಪರೀಕ್ಷೆ ತಡೆ ಬಗ್ಗೆ ಚರ್ಚಿಸಲಾಗುತ್ತದೆ. ರಾಜ್ಯಗಳ ಜೊತೆ ಚರ್ಚೆ ನಡೆಸುವುದು ಬಹಳ ಮುಖ್ಯವಾಗಿದೆ ಹೀಗಾಗಿ ಸಚಿವಾಲಯವು ಈ ಬಗ್ಗೆ ಯೋಜನೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂದಿನ ವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಚಿವರು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಜೊತೆ ಸಂವಾದ ನಡೆಸಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights