Lock down ಸಡಿಲಿಕೆ : ಮತ್ತೆ U ಟರ್ನ್ ಹೊಡೆದ ರಾಜ್ಯ ಸರಕಾರ, ಗೂಂಡಾ ವರ್ತನೆಗೆ ಕಡಿವಾಣ

Lock down ಕಠೊಣ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗುವುದು ಎನ್ನುವ ರಾಜ್ಯದ ಜನರ ನಿರೀಕ್ಷೆ ಹುಸಿಯಾಗಿದೆ. BSY ಸರಕಾರ ಮತ್ತೆ U ಟರ್ನ್ ಹೊಡೆದಿದೆ…ಯಾವುದೇ ರೀತಿಯ ರಿಯಾಯತಿಯನ್ನು ನೀಡಿಲ್ಲ.. ಉತ್ತರ ಪ್ರದೇಶ ಮಾದರಿಯಲ್ಲಿ ಗೂಂಡಾಗಳ ವಿರುದ್ಧ, ಗೂಂಡಾಗಿರಿಗೆ ಕುಮ್ಮಕ್ಕು ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ರಾಜ್ಯ ಸರಕಾರವು ಮುಂದಾಗಿದೆ.

 

ಭಾನುವಾರ ರಾತ್ರಿ ಪಾದರಾಯನಪುರದಲ್ಲಿ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ನಡೆದ ದುಂಡಾವರ್ತನೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಿದೆ. ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆಯಾಗಿದ್ದು, ಇದಕ್ಕಾಗಿ ಅಗತ್ಯ ಬಂದರೇ ಸುಗ್ರೀವಾಜ್ಞೆ ಹೊರಡಿಸಲು ಸಹ ತೀರ್ಮಾನಕ್ಕೆ ಬರಲಾಗಿದೆ.

ಈ ಮಧ್ಯೆ ರಾಜ್ಯದಲ್ಲಿ ಮೇ 3 ರ ವರೆಗೂ ಲಾಕ್‌ಡೌನ್ ಯಥಾಸ್ಥಿತಿ ಮುಂದುವರಿಸಲು ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಾರ್ವಜನಿಕರು ಲಾಕ್‌ಡೌನ್ ಮುರಿದ್ರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಲ್ಲದೇ ತುರ್ತು ಸೇವೆಯಲ್ಲಿರುವವರ ಜೊತೆ ಸಹಕರಿಸದಿದ್ದರೇ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲು ಸಹ ಸಂಪುಟ ಅಸ್ತು ಎಂದಿದೆ.

ಮೂರ್ನಾಲ್ಕು ದಿನಗಳಲ್ಲಿ ಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಗಳು ಸಭೆ ನಡೆಸಿ ಮುಂದಿನ ಕ್ರಮಗಳ ತೀರ್ಮಾನ ಮಾಡಲಿದ್ದು, ಅಲ್ಲಿಯ ತನಕ ಲಾಕ್‌ಡೌನ್ ಅನ್ನು ಸಹ ಈಗಿರುವ ಸ್ಥಿತಿಯಲ್ಲಿಯೇ ಮುಂದುವರಿಸಲ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights