ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ -ಸಚಿವ ಎಚ್.ನಾಗೇಶ್ ವಿಭಿನ್ನ ವಿಶ್ಲೇಷಣೆ

ಲಾಕ್ ಡೌನ್ ನಿಂದಾಗಿ ಮದ್ಯ ಮಾರಾಟ ಬಂದ್ ಹಲವು ಮದ್ಯವ್ಯಸನಿಗಳು ಮದ್ಯ ಸಿಗದೇ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ನಮ್ಮ ಕಣ್ಮುಂದಿವೆ. ಇದೇ ವೇಳೆ ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ.

ಈ ಹಿಂದೆ ಮನೆ ಮನೆಗೆ ಮದ್ಯಮಾರಾಟ ಮಾಡುವುದಾಗಿ ಹೇಳಿಕೆ ಕೊಟ್ಟಿದ್ದ ಸಚಿವರು ನಂತರ ವಿವಾದ ಸೃಷ್ಟಿಯಾದ ನಂತರ ತಾವು ಹೇಳಿದ ಮಾತಿಗೆ ಕ್ಷಮೆಕೇಳಿದ್ರು. ಇಂದು ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ ವೇಳೆ ಕಳ್ಳಬಟ್ಟಿ ಹತೋಟಿಗೆ ತರಲು ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ. ಮೇ-3 ವರೆಗೂ ಪ್ರಧಾನಿಗಳ ಮಾತಿಗೆ ಗೌರವಿಸಿ ಸಹಕರಿಸಿ ಎಂದು ಮದ್ಯಪ್ರಿಯರಿಗೆ ಸಲಹೆ ನೀಡಿದರು.

ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದ್ದು ಅದೆಷ್ಟೋ ಕಡೆ ಮದ್ಯ ಕಳ್ಳತನ ಕೂಡ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಸಿಗದ್ದಕ್ಕೆ ಇಬ್ಬರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ವರದಿ ಆಗಿದೆ. ಹೀಗಾಗಿ ಮಾಜಿ ಸಚಿವ, ಹೆಚ್.ವಿಶ್ವನಾಥ್, ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು. ಪ್ರತಿನಿತ್ಯ ನೀಡದಿದ್ದರೂ ವಾರದಲ್ಲಿ ಎರಡು ದಿನ ಎಂಎಸ್‍ಐಎಲ್ ಸೇರಿದಂತೆ ಬಾರ್ ಗಳಲ್ಲಿ ಪಾರ್ಸಲ್ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಸಲಹೆ ಕೊಟ್ಟಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights