ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್…

ಇಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮನ್ ಕೀ ಬಾತ್ ಹೇಳಲಿದ್ದಾರೆ. ಕಳೆದ ಬಾರಿ ಮಾತನಾಡಿದ ಸಮಯದಲ್ಲಿ ಮೋದಿ ಲಾಕ್ ಡೌನ್ ಮೇ3 ವರೆಗೂ ವಿಸ್ತರಿಸಿ ದೇಶದ ಜನತೆಯಲ್ಲಿ ಕ್ಷಮೆಯನ್ನು ಕೋರಿದ್ದ ಅವರು ವೈಸರ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಈ ಬಾರಿ ಮನ್ ಕೀ ಬಾತ್ ನಲ್ಲಿ ಮೋದಿಯವರು ಬಹುತೇಕ ಕೊರೊನಾ ಬಗ್ಗೆ ಮಾತನಾಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಲಾಕ್ ಡೌನ್ ಜಾರಿಯಲ್ಲಿದ್ದರೂ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಏರುಗತಿಯಲ್ಲಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ವೈರಸ್ ಹರಡುವುದನ್ನ ತಡೆಗಟ್ಟಲು ಮೋದಿ ಕಳೆದ ಬಾರಿ ಲಾಕ್ ಡೌನ್ ನನ್ನು ಮೇ3 ರವರೆಗೆ ವಿಸ್ತರಣೆ ಮಾಡಿ ಸಾರ್ವಜನಿಕರು ಲಾಕ್ ಡೌನ್ ನಿಯಮಗಳನ್ನು ಪಾಲಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು.

ಕೊರೊನಾ ಸಂಕಷ್ಟುದ ನಡುವೆಯೂ ಆಗಾಗ ಸಾರ್ವಜನಿಕರನ್ನುದ್ದೇಶಿಸಿ ಮೋದಿ ಅವರು ಮಾತನಾಡುತ್ತಿದ್ದಾರೆ. ಜನತಾ ಕರ್ಪ್ಯೂ ನಲ್ಲಿಯೂ ಮೋದಿ ಹಲವಾರು ಬಾರಿ ಮೋದಿ ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಇಂದು ಅದೇ ವಿಚಾರವಾಗಿ ಮೋದಿ ಮಾತನಾಡುವ ನಿರೀಕ್ಷೆ ಇದೆ. ಕೊರೊನಾ ಬಿಕ್ಕಟ್ಟು ಆರಂಭವಾದ ಬಳಿಕ ಎರಡನೇ ಬಾರಿ ಮನ್ ಕಿ ಬಾತ್ ಇದಾಗಿದ್ದು, ದೇಶದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನ ಕುರಿತು ಮಾತನಾಡಲಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights