What an Idea? : ಮಗನ ಮದುವೆಗಾಗಿ ಅಂಬುಲೆನ್ಸ್‌ನಲ್ಲಿ ರೋಗಿಯಾದ ತಂದೆ!

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ ಎನ್ನುವ ಕಾರಣಕ್ಕೆ ಅಂಬುಲೆನ್ಸ್‌ನಲ್ಲಿ ರೋಗಿಯಾದ ತಂದೆಯಿಂದ ಮಗ ಮದುವೆಯಾದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.

ಹೌದು … ತನ್ನ ತಂದೆಯನ್ನು ಅಬ್ಯುಲೆಂನ್ಸ್ ನಲ್ಲಿ ಮಲಗಿಸಿಕೊಂಡು ಉತ್ತರ ಪ್ರದೇಶದಿಂದ ದೆಹಲಿಗೆ ಪ್ರಯಾಣಿಸಿ ಅಲ್ಲಿ ವಿವಾಹವಾಗಿ ವಾಪಸ್ ಬಂದಿದ್ದಾನೆ ಮಗ.

ತಂದೆಗೆ ಅನಾರೋಗ್ಯ ಎಂದು ಹೇಳಿ 26 ವರ್ಷದ ಅಹ್ಮದ್ ಬಾಡಿಗೆ ಅಂಬುಲೆನ್ಸ್ ತೆಗೆದುಕೊಂಡಿದ್ದಾನೆ. ನಂತರ ಅವರ ತಂದೆಯನ್ನು ಅಂಬುಲೆನ್ಸ್‌ನಲ್ಲಿ ಮಲಗಿಸಿ ಅವರಿಗೆ ಡ್ರಿಪ್ಸ್ ಹಾಕಿ ಉತ್ತರ ಪ್ರದೇಶದಿಂದ ದೆಹಲಿಗೆ ಪ್ರಯಾಣಿಸಿದ್ದಾನೆ. ಚೆಕ್‍ಪೋಸ್ಟ್ ವೇಳೆ ಅಡ್ಡಗಟ್ಟಿದ ಪೊಲಿಸರಿಗೆ ತಂದೆಯನ್ನು ತೋರಿಸಿ ವಂಚಿಸಿದ್ದಾನೆ. ಜೊತೆಗೆ ದೆಹಲಿಗೆ ಹೋಗಿ ಅಲ್ಲಿ ಮದುವೆಯಾಗಿ ಪುನಃ ಹೆಂಡತಿಯ ಸಮೇತ ಮಂಗಳವಾರ ಉತ್ತರ ಪ್ರದೇಶದ ತನ್ನ ಮನೆಗೆ ಮರಳಿದ್ದಾನೆ. 

ಈ ಪ್ಲಾನ್ ಏನೋ ನೀಟಾಗೇ ವರ್ಕ್ ಆಗಿದೆ. ಆದರೆ ಅವರು ಸಿಕ್ಕಿಬಿದ್ದ ವಿಚಾರ ಕೇಳಿ. ಅಹ್ಮದ್ ದೆಹಲಿಯ ಹುಡುಗಿಯನ್ನು ಮದುವೆ ಮಾಡಿಕೊಂಡು ಬಂದಿದ್ದು, ನೆರೆಹೊರೆಯವರಿಗೆ ಗೊತ್ತಾಗಿದೆ. ಆ ಹೊತ್ತಿಗಾಗಲೇ ಅವರು ವಾಸವಿದ್ದ ಖತೌಲಿ ಪ್ರದೇಶ ಐದು ಕೊರೊನಾ ಪಾಸಿಟಿವ್ ಪ್ರಕರಣಗಳಿಂದ ಕೊರೊನಾ ಹಾಟ್‍ಸ್ಟಾಟ್ ಆಗಿ ನಿರ್ಮಾಣವಾಗಿತ್ತು. ಈ ನಡುವೆ ದೆಹಲಿಯಿಂದ ವಾಪಸ್ ಬಂದ ಇವರನ್ನು ಕಂಡ ಅಕ್ಕಪಕ್ಕದವರು ಗಾಬರಿಗೊಂಡು ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.ನೆರೆಹೊರೆಯವರಿಂದ ಮಾಹಿತಿ ಪಡೆದ ನಂತರ ಪೊಲೀಸ್ ಇಲಾಖೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಇಸ್ಲಾಂ ನಗರ ಪ್ರದೇಶದ ಖತೌಲಿಯಲ್ಲಿರುವ ಅಹ್ಮದ್ ಮನೆಗೆ ಬಂದಿದ್ದಾರೆ. ಈ ವೇಳೆ ಈತನ ಪ್ಲಾನ್ ಬಹುರಂಗವಾಗಿದೆ.

ಮೊದಲ್ಲೊಂದು ಬಾರಿ ಇದೇ ರೀತಿ ಬೇರೆಯದ್ದೇ ಪ್ಲಾನ್ ಮಾಡಿದ್ದ ಅಹ್ಮದ್ ಸಿಕ್ಕಿಹಾಕಿಕೊಂಡು ಮನೆಗೆ ಬಂದಿದ್ದ. ನಂತರ ಸಕ್ಸಸ್ ಕಂಡಿದ್ದರೂ ಪೊಲೀಸರ ಅತಿಥಿಯಾಗಿದ್ದಾನೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights