ಗರ್ಭಿಣಿಗೆ ಕೊರೊನಾ – ಕೆಲಸ ಮಾಡಲೊಲ್ಲೆ ಎಂದ ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿಗಳು!

ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಯ ಸಿಬ್ಬಂದಿಗಳು ಕೆಲಸ ಮಾಡಲು ನಿರಾಕರಿಸಿದ್ದಾರೆ.

ಹೌದು.. ಇಂದು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಪಾಸಿಟಿವ್ ಬಂದರೆ ಇಡೀ ಆಸ್ಪತ್ರೆಯನ್ನೇ ಮುಚ್ಚಿ ಬಿಡ್ತಾರೆ. ಆದ್ರೆ ಇಲ್ಲಿ ನಮ್ಮನ್ನ ರಕ್ಷಣೆ ಮಾಡಿಕೊಳ್ಳಲು ಒಂದು ಒಳ್ಳೆ ಮಾಸ್ಕ್ ಇಲ್ಲ. ಇನ್ನೂ ಪಿಪಿಇ ಕಿಟ್ ದೂರದ ಮಾತು. ಹೀಗಿರುವಾಗ ಕೆಲಸ ಹೇಗೆ ಮಾಡೋದು ಎಂದು ಆಸ್ಪತ್ರೆಯ ಸಿಬ್ಬಂದಿಗಳು ಆತಂಕ ಹೊರಹಾಕಿದ್ದಾರೆ.

ಪಾದರಾಯನಪುರ ನಿವಾಸಿ ಹಾಗೂ ಎಂಟು ತಿಂಗಳ ತುಂಬಿದ ಸೋಂಕಿತ ಗರ್ಭಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕೊರೋನಾ ಪಾಸಿಟಿವ್ ಬಂದ ಕೂಡಲೇ ಆಕೆಯನ್ನು ಪಕ್ಕದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರ ಸಂಬಂಧಿಗಳು ಆಸ್ಪತ್ರೆಯಲ್ಲಿ ಓಡಾಡಿದ್ದಾರೆ. ಹೀಗಿರುವಾಗ ನಮ್ಮನ್ನ ನಾವು ಹೇಗೆ ರಕ್ಷಣೆ ಮಾಡಿಕೊಳ್ಳುವುದು? ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದೇವೆ. ಹೀಗಿದ್ದರೂ ಯಾವುದೇ ರಕ್ಷಣೆ ಇಲ್ಲದೇ ಕೆಲಸ ಮಾಡಲು ಹೇಳುತ್ತಾರೆ. ಹೀಗಾಗಿ  ಅಲ್ಲಿಯ ಸ್ನಾತಕೋತ್ತರ ವೈದ್ಯರು, ನರ್ಸ್ ಹಾಗೂ ಇತರೆ ಸಿಬ್ಬಂದಿ ಪ್ರತಿಭಟನೆಗಿಳಿದಿದ್ದಾರೆ. ತಾವ್ಯಾರು ಕೆಲಸ ಮಾಡೋದಿಲ್ಲ ಎಂದು ಹಠ ಹಿಡಿದಿದ್ದಾರೆ. ಇದರಿಂದಾಗಿ ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳಿಗೆ ಕಷ್ಟದ ಸ್ಥಿತಿ ಉಂಟಾಗಿದೆ.

ಆಸ್ಪತ್ರೆಯಲ್ಲಿ ಸಂಪೂರ್ಣ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಆದರೆ, ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲೊಂದೆನಿಸಿರುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಕೊರೋನಾದಂಥ ಗಂಭೀರ ಪ್ರಕರಣಗಳಲ್ಲಿ ಇಷ್ಟು ನಿರ್ಲಕ್ಷ್ಯತೆ ತೋರುತ್ತಿರುವುದು ಎಷ್ಟು ಸರಿ ಎಂಬುದು ಈಗ ಉದ್ಭವಿಸಿರುವ ಪ್ರಶ್ನೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights