ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಹಾಕದಿದ್ದರೆ ದಂಡ: ದಂಡದ ಮೊತ್ತ ಎಷ್ಟು ಗೊತ್ತಾ
ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದೇ ಇರುವವರಿಗೆ 200 ರೂಗಳ ದಂಡ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಾರ್ವಜನಿಕರು ಯಾವರೀತಿಯಲ್ಲಿ ನಿಯಮಗಳನ್ನು ಪಾಲಿಸಬೇಕು, ಏನೇಲ್ಲಾ ಕ್ರಮಗಳನ್ನು ವಹಿಸಬೇಕು ಎಂದು ಸರ್ಕಾರ ಪ್ರತಿದಿನ ಎಚ್ಚರಿಕೆ ಕೊಡುತ್ತಲೇ ಇದೆ. ಆದರೆ ಇದನ್ನು ಎಷ್ಟು ಮಂದಿ ಪಾಲಿಸುತ್ತಿದ್ದಾರೆ ಎಂಬುದು ಪ್ರಶ್ನೆ. ಸಾರ್ವಜನಿಕವಾಗಿ ಓಡಾಡುವಾಗ ಜನರು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳುತ್ತಿದ್ದರೂ ಕೆಲವರು ಮಾತ್ರ ಪಾಲಿಸುತ್ತಾರೆ. ಬಹುತೇಕರು ಉಲ್ಲಂಘಿಸುತ್ತಾರೆ. ಅದಕ್ಕಾಗಿ ಸರ್ಕಾರ ದಂಡ ಹಾಕುವ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
ಕೊರೋನಾ ಪೀಡಿತರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಹಾಕದಿದ್ದರೆ ದಂಡ ಎಂಬ ನಿಯಮವನ್ನು ಈಗಾಗಲೇ ಕೆಲವು ರಾಜ್ಯಗಳಲ್ಲಿ ಜಾರಿಗೆ ತರಲಾಗಿದೆ. ಇದೀಗ ಕರ್ನಾಟಕ ಸರ್ಕಾರ ಕೂಡ ಅದೇ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಜನತೆಯ ಸುರಕ್ಷತೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಬೇಕು ಎನ್ನುವ ನಿಯಮವನ್ನು ಉಲ್ಲಂಘಿಸಿದವರಿಗೆ 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ರಾಜ್ಯ ಸರ್ಕಾರ ಜನತೆಯ ಸುರಕ್ಷತೆಗಾಗಿ ರೂಪಿಸಿರುವ ಈ ನಿಯಮವನ್ನು ಉಲ್ಲಂಘಿಸಿದವರಿಗೆ 200 ರೂ. ದಂಡ ವಿಧಿಸಲಾಗುವುದು.
ಜಾಗೃತರಾಗಿ, ಸಾಮಾಜಿಕ ಸ್ವಾಸ್ಥ್ಯ ಕಾಪಾಡಿ.#WearTheMask pic.twitter.com/wLFHESUgER
— B Sriramulu (@sriramulubjp) May 28, 2020
ಕೊರೋನಾ ಸೋಂಕು ತಗುಲಿರಬಹುದು ಎನ್ನುವ ಸಂದೇಹದ ಮೇಲೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾದ ನಂತರ ಶಂಕಿತ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರದೆ ಇದ್ದಲ್ಲಿ, ಅಂತಹವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಬಹುದೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಈ ಕುರಿತು ಇಲಾಖೆ ಆದೇಶ ಹೊರಡಿಸಿದ್ದು, ಒಂದು ವಾರದ ಬಳಿಕ ಸೋಂಕಿನ ಲಕ್ಷಣಗಳಿಲ್ಲದ ವ್ಯಕ್ತಿಯನ್ನು ಆರ್.ಟಿ.ಪಿ.ಸಿ.ಆರ್ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯವಿಲ್ಲ, ಕೇವಲ ಥರ್ಮಲ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಟೈನ್‌ಗೆ ಒಳಪಡಿಸಬಹುದು ಎಂದು ತಿಳಿಸಲಾಗಿದೆ.

