ಕರ್ನಾಟಕಕ್ಕೂ ನಿಸರ್ಗ ಚಂಡಮಾರುತ ಅಪ್ಪಳಿಸುವ ಆತಂಕ; ಕರಾವಳಿಯಲ್ಲಿ ಹೈ ಅಲರ್ಟ್

ನಿಸರ್ಗ ಚಂಡಮಾರುತ ಆಪ್ಪಳಿಸುವ ಭೀತಿಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿವೆ ಇಂದು (ಬುಧವಾರ) 120 ಕಿ.ಮೀ ವೇಗದಲ್ಲಿ ಚಂಡಮಾರುವ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ. ಹೀಗಾಗಿ ಕರ್ನಾಟಕದ ಕರಾವಳಿ ಭಾಗದಲ್ಲೂ ಆತಂಕ ಶುರುವಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ  ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. 50-60 ಕಿಮೀ  ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, 2.6ರಿಂದ 3.8 ಕಿಮೀ ಎತ್ತರದವರೆಗೆ ಅಲೆಗಳು ಏಳುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಇಡೀ ದಿನ ನಿರಂತರ ತುಂತುರು ಮಳೆಯಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ನದಿಗಳ ಹರಿವು ಹೆಚ್ಚಳವಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights