ಟ್ರ್ಯಾಕ್ಟರ್ ಹೊಂದಿರುವುದಕ್ಕೆ ರೈತರಿಂದ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನ!: ಹೆಚ್ಡಿಕೆ
ಟ್ರ್ಯಾಕ್ಟರ್, ವಾಹನ ಇರುವ ರೈತರು ತಮ್ಮ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಬೇಕು. ರೈತರು ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಬೇಕು ಎಂದು ಅದೇಶಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಅವರ ನಿರ್ಧಾರ ಮೂರ್ಖತನದ್ದು ಎಂದವರು ಸರಣಿ ಟ್ವೀಟ್ಗಳ ಮೂಲಕ ಟೀಕಿಸಿದ್ದಾರೆ.
ಟ್ರ್ಯಾಕ್ಟರ್, ವಾಹನ ಇರುವ ರೈತರು ಬಿಪಿಎಲ್ ಕಾರ್ಡ್ಗಳನ್ನು ಹಿಂದಿರುಗಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?
(2/4)— H D Kumaraswamy (@hd_kumaraswamy) June 7, 2020
ರೈತರಿಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ ಎಂದವರು ಪ್ರಶ್ನಿಸಿದ್ದಾರೆ.
ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.
ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್ ಕಾರ್ಡ್ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ.
(3/4)— H D Kumaraswamy (@hd_kumaraswamy) June 7, 2020
ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದು ನಾಲ್ಕನೇ ಹಾಗೂ ಕೊನೆಯ ಟ್ವೀಟ್ನಲ್ಲಿ ಹೆಚ್ಡಿಕೆ ಝಾಡಿಸಿದ್ದಾರೆ.

