ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಜೊತೆಗೆ ಗುಂಡಿನ ಚಕಮಕಿ ‌: ನಾಲ್ವರು ಉಗ್ರರ ಹತ್ಯೆ

ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್ ನಲ್ಲಿ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆೆೆ.

ಕಳೆದ 24 ಗಂಟೆಗಳಲ್ಲಿ 9 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಇಂದು ಮುಂಜಾನೆ ನಡೆದ ಗುಂಡಿನ ದಾಳಿ ಯಲ್ಲಿ ಇಬ್ಬರು ಭದ್ರತಾ ಪಡೆಯ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೋಪಿಯಾನ ಜಿಲ್ಲೆಯ ರಬಾನ್ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಐವರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿ ಹತ್ಯೆಗೈದಿದ್ದರು. ಇದು ಎರಡನೇ ದಾಳಿಯಾಗಿದ್ದು ಮತ್ತೆ ನಾಲ್ವರು ಉಗ್ರರು ಹತರಾಗಿದ್ದಾರೆ.

ಉಗ್ರರ ವಿರುದ್ದದ ಕಾರ್ಯಾಚರಣೆ ಮುಂದುವರಿದಿದೆ. ಹತ್ಯೆಯಾಗಿರುವ ಉಗ್ರರ ಮಾಹಿತಿಯನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ಆದರೆ ಈಗ ಹತ್ಯೆಯಾಗಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿರಬಹುದು ಎಂದು ಶಂಕಿಸಲಾಗಿದೆ.

ಶೋಧ ಕಾರ್ಯಾಚರಣೆ ಮುಂದುವರಿದಿದ್ದು ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿಯ ಮುಖಾಮುಖಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ದಕ್ಷಿಣ ಕಾಶ್ಮೀರದ ಜಿಲ್ಲೆಯ ಪಿಂಜೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights