ರಾಜ್ಯಸಭಾ ಚುನಾವಣೆ: ರಾಜ್ಯ ಬಿಜೆಪಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್
ರಾಜ್ಯಸಭೆಗೆ ಬಿಜೆಪಿಯು ಯಾರಿಗೆ ಟಿಕೆಟ್ ನೀಡಲಿದೆ ಎಂಬುದು ಬಾರಿ ಕುತೂಹಲ ಮೂಢಿಸಿತ್ತು. ಮಂಗಳವಾರವೇ (ನಾಳೆ) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದರೂ ಬಿಜೆಪಿ ಟಿಕೆಟ್ ಘೋಷಣೆ ಮಾಡಿರಲಿಲ್ಲ.
ಇಂದು ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಅಭ್ಯರ್ಥಿಗಳ ಹೆಸರುಗಳನ್ನು ಫೈನಲ್ ಮಾಡಿ, ಪ್ರಕಟಿಸಿದ್ದು, ರಾಜ್ಯ ಬಿಜೆಪಿಗರಿಗೆ ಶಾಕ್ ನೀಡಿದೆ.
ರಾಜ್ಯ ಬಿಜೆಪಿ ಘಟಕವು ಸೂಚಿಸಿದ್ದ ಪ್ರಭಾಕರ ಕೋರೆ, ರಮೇಶ್ ಕತ್ತಿ ಹಾಗೂ ಪ್ರಕಾಶ್ ಶೆಟ್ಟಿಯವರ ಹೆಸರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಶಿಫಾರಸ್ಸು ಮಾಡಿತ್ತು. ಆದರೆ, ರಾಜ್ಯ ಬಿಜೆಪಿ ಕಳಿಸಿದ್ದ ಲಿಸ್ಟ್ ಅನ್ನು ರಿಜೆಕ್ಟ್ ಮಾಡಿರುವ ಬಿಜೆಪಿ ಹೈಕಮಾಂಡ್ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಯಿ ಅವರಿಗೆ ಟಿಕೆಟ್ ನೀಡಿದೆ.
ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಅಶೋಕ್ ಗಸ್ತಿ ಹಾಗೂ ಬಿಜೆಪಿಯಲ್ಲಿ 1989ರಿಂದ ಸಕ್ರಿಯರಾಗಿದ್ದ, ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿದ್ದ ಆರೆಸ್ಸೆಸ್ ಹಿನ್ನೆಲೆಯಿರುವ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ವಿಶೇಷವೆಂದರೆ, ಈ ಇಬ್ಬರೂ ಉತ್ತರ ಕರ್ನಾಟಕಕ್ಕೆ ಸೇರಿದವರಾಗಿದ್ದಾರೆ.
ಇದನ್ನೂ ಓದಿ: ರಾಜ್ಯಸಭಾ ಚುನಾವಣಾ ಕಣಕ್ಕಿಳಿಯಲು ದೇವೇಗೌಡರು ಸಮ್ಮತಿ!

