ಕರ್ನಾಟಕದಲ್ಲೂ ರದ್ದಾಗುತ್ತಾ SSLC ಪರೀಕ್ಷೆ; ಶಿಕ್ಷಣ ಸಚಿವರು ಹೇಳಿದ್ದೇನು?

ಕೊರೊನಾ ವೈರಸ್‌ ಭೀತಿಯಿಂದ ಶಾಲೆ-ಕಾಲೇಜುಗಳನ್ನು ಮುಚ್ಚಿವುದರ ಜೊತೆಗೆ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಆದರೆ, ತೆಲಂಗಾಣದಲ್ಲಿ ಹಾಗೂ ತಮಿಳುನಾಡಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿಯೂ ಕೂಡ 10ನೇ ತರಗತಿ ಪರೀಕ್ಷೆ ನಡೆಯುತ್ತದೆಯೇ? ರದ್ದಾಗುತ್ತದೆಯೇ? ಎಂಬ ಪ್ರಶ್ನೆ ಎದುರಾಗಿತ್ತು.

ಈ ಪ್ರಶ್ನೆಗೆ ಶಿಕ್ಷಣ ಸಚಿವರಾದ ಎಸ್‌. ಸುರೇಶ್‌ ಕುಮಾರ್‌ ಅವರೇ ಉತ್ತರಿಸಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಿಗದಿಯಾಗಿರುವ ದಿನಾಂಕದಲ್ಲೇ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ನಿರ್ಧಾರ ಬದಲಾಯಿಸುವ ಮಾತೇ ಇಲ್ಲ. ಜೂನ್‌ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದತೆ ನಡೆಸಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು ಶಾಲೆಗಳನ್ನು ಯಾವಾಗ ಆರಂಭಿಸಬೇಕು? ಎನ್ನುವುದರ ಕುರಿತು ಅಧ್ಯಯನ ನಡೆಸುವಂತೆ ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಜುಲೈನಿಂದ ಶಾಲೆಗಳನ್ನು ಪ್ರಾರಂಭಿಸುವಂತೆ ಶಿಫಾರಸ್ಸು ಮಾಡಿದೆ. ಬಹುಶಃ ಆಗಸ್ಟ್‌ನಿಂದ ಶಾಲೆಗಳನ್ನು ತೆರೆಯಬಹುದು ಎಂದು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights