ಭಾರತದಲ್ಲಿ ಮುಂದುರೆವರೆದ ಕೊರೊನಾ ಆಕ್ರಮಣ; ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ ಕೊರೋನಾ ಆಕ್ರಮಣ ಏರುತ್ತಲೇ ಇದೆ. ಒಂದೇ ದಿನ 15,968 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,56,183 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್’ಗೆ 465 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 14,476 ಕ್ಕೆ ತಲುಪಿದೆ.

ಇನ್ನು 4,56,183 ಮಂದಿ ಸೋಂಕಿತರ ಪೈಕಿ 2,58,685 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 183022 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ 1 ಲಕ್ಷ ಜನಸಂಖ್ಯೆಗೆ 1 ಕೊರೋನಾ ಸಾವು ಸಂಭವಿಸುತ್ತಿದೆ. ಜಾಗತಿಕ 6.04ರ ಸಾವಿನ ಸರಾಸರಿಗೆ ಹೋಲಿಸಿದರೆ ಭಾರತದಲ್ಲಿ ಮರಣ ಪ್ರಮಾಣ ಅತ್ಯಂತ ಕಡಿಮೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights