ರಾಜಧಾನಿ ಲಾಕ್‌ಡೌನ್; ತಮ್ಮೂರುಗಳಿಗೆ ತೆರಳುವವರಿಗೆ 6 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಿದ KSRTC

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್‍ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ( KSRTC ) ಸೋಮವಾರ ಮತ್ತು ಮಂಗಳವಾರ 1,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ ಎಂದು ತಿಳಿಸಿದೆ.

ಲಾಕ್‌ಡೌನ್‌ ಸಡಿಲಗೊಂಡಿದ್ದರಿಂದಾಗಿ ರಾಜ್ಯ ಸಾರಿಗೆ ಬಸ್‌ಗಳನ್ನು ಓಡಿಸಲಾಗುತ್ತಿತ್ತು. ಒಂದು ಬಸ್‌ನ ಸಾಮರ್ಥ್ಯದ 33% ಮಾತ್ರ ಪ್ರಯಾಣೀಕರ ಪ್ರಯಾಣಕ್ಕೆ ಅವಕಾಶ ಮಡಿಕೊಡಲಾಗಿತ್ತು. ನಾಳೆಯಿಂದ ಮತ್ತೆ ಲಾಕ್‌ಡೌನ್‌ ಘೋಷಿಸಲಾಗಿದ್ದು, ಕಾರ್ಮಿಕರು ತಮ್ಮೂರಿಗೆ ತೆರಳಲು ಕೆಎಸ್‌ಆರ್‌ಟಿಸಿ ಈಗಾಗಲೇ ರಾಜ್ಯ ರಾಜಧಾನಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ 249 ಹೆಚ್ಚುವರಿ ಬಸ್‌ಗಳನ್ನು ಓಡಿಸಿದ್ದು, ಇದುವರೆಗೆ 6,641 ಪ್ರಯಾಣಿಕರನ್ನು ಸಾಗಿಸಿದೆ. ಅಲ್ಲದೆ, 231 ಬಸ್‌ಗಳನ್ನು ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿರುವುದರಿಂದ ತಮ್ಮೂರುಗಳಿಗೆ ಹೋಗುವವರು ಅವಸರ ಮತ್ತು ಆತಂಕಪಡಬೇಕಿಲ್ಲ ಎಂದು ಕೆಎಸ್‌ಆರ್‌ಟಿಸಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ವ್ಯಕ್ತಿಗತ ಅಂತರ ಖಚಿತಪಡಿಸಿಕೊಂಡ ನಂತರ ಮತ್ತು ಥರ್ಮಲ್ ಸ್ಕ್ರೀನಿಂಗ್ ನಡೆಸಿ ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights