ಶಾಲಾ ಬಸ್ ಪಲ್ಟಿ : 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ – 3 ಮಕ್ಕಳ ಸ್ಥಿತಿ ಗಂಭೀರ
ತುಮಕೂರು ತಾಲ್ಲೂಕಿನ ನಾಗವಲ್ಲಿ ಗ್ರಾಮದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಘಟನೆ ನಡೆದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು ಎರೆಡರಿಂದ ಮೂರು ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನ ನಾಗವಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಧಕೃಷ್ಣನ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಶಾಲಾವಾಹನವಾಗಿದ್ದು, ಇಂದು ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದಾಗ ಈ ಘಟನೆ ನಡೆದಿದೆ. ಶಾಲಾ ವಾಹನದಲ್ಲಿ ಸಮಸ್ಯೆ ಇತ್ತಾ ಅಥವಾ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದಿಯಾ ಅನ್ನೋ ವಿಚಾರ ತನಿಖೆ ಮೂಲಕ ತಿಳಿಯಬೇಕಿದ್ದು ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
