ಕುತ್ತಿಗೆಗೆ ಗುಂಡು ಹಾರಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ : ಆರ್.ಪಿ ಶರ್ಮಾ ಸ್ಥಿತಿ ಗಂಭೀರ!
ತಮ್ಮ ಸರ್ವೀಸ್ ರಿವಾಲ್ವರ್ನಿಂದಲೇ ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಇತ್ತೀಚೆಗೆ ತೀವ್ರ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ವೈದ್ಯಕೀಯ ಮೂಲಗಳು ತಿಳಿಸಿವೆ.
ಹಿರಿಯ ಐಪಿಎಸ್ ಅಧಿಕಾರಿ ಇಂದು ಮಿಸ್ ಫೈರ್ ಮಾಡಿಕೊಂಡಿದ್ದರು ಎನ್ನಲಾಗಿದೆ. ತಮ್ಮ ಸರ್ವೀಸ್ ರಿವಾಲ್ವರ್ನಿಂದಲೇ ಕುತ್ತಿಗೆಗೆ ಮಿಸ್ ಫೈರ್ ಮಾಡಿಕೊಂಡಿದ್ದ ಇವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಲ್ಲಿನ ವೈದ್ಯರ ತಂಡ ಆರ್.ಪಿ ಶರ್ಮಾರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಆರ್.ಪಿ ಶರ್ಮಾ ಕೌಟುಂಬಿಕ ಸಮಸ್ಯೆಯಿಂದ ತಾವೇ ಫೈರಿಂಗ್ ಮಾಡಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ರಾ? ಎಂಬ ಚರ್ಚೆಯೂ ನಡೆಯುತ್ತಿದೆ. ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ವೈದ್ಯರು ಆರ್.ಪಿ ಶರ್ಮಾರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಏನು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆಯೇ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್, ಆರ್.ಪಿ ಶರ್ಮಾ ಆಕಸ್ಮಿಕವಾಗಿ ಫೈರ್ ಮಾಡಿಕೊಂಡಿದ್ಧಾರೆ ಎಂದು ಮಾಹಿತಿ ನೀಡಿದ್ಧಾರೆ.

