ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ
2021ರ ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ವರದಿಯಾಗಿದೆ.
ಜಾಗತಿಕ ಸಂಘರ್ಷಗಳನ್ನು ತಡೆಯುವಲ್ಲಿ ಟ್ರಂಪ್ ಅವರ ಕೊಡುಗೆ ಅಪಾರವಾಗಿದೆ. ಹಾಗಾಗಿ ಅವರನ್ನು ನಾರ್ವೆ ದೇಶದ ಸಂಸದ ಕ್ರಿಶ್ಚಿಯನ್ ಟೈಬ್ಲಿಂಗ್ ಜಿಡೆ ಅವರು ನಾಮ ನಿರ್ದೇಶ ಮಾಡಿದ್ದಾರೆ ಎಂದು ಹೇಳಲಾಗಿದೆ.
2021 ಒಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಗೆದ್ದರೆ, ಅವರ ಹಿಂದಿನ ರಾಜಕೀಯ ಎದುರಾಳಿಯಾಗಿದ್ದ ಬರಾಕ್ ಒಬಾಮ ಅವರನ್ನು ಅನುಸರಿಸಿದಂತಾಗುತ್ತದೆ. ಒಬಾಮ ಅವರು “ಅಂತಾರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ಜನರ ನಡುವಿನ ಸಹಕಾರವನ್ನು ಬಲಪಡಿಸುವ ಪ್ರಯತ್ನಗಳಿಗಾಗಿ” ಒಬಾಮಾ ಅವರಿಗೆ 2009 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.
ಇದನ್ನೂ ಓದಿ: ವಿದೇಶಿ ವಿದ್ಯಾರ್ಥಿಗಳನ್ನು ಹೊರಹಾಕುವ ನೀತಿ; ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ದಾಖಲಿಸಿದ 17 ಕಂಪನಿಗಳು!

