ಉದ್ದವ್ ಠಾಕ್ರೆಯ ವ್ಯಂಗ್ಯ ಕಾರ್ಟೂನ್ ಶೇರ್ ಮಾಡಿದ್ದಕ್ಕಾಗಿ ನೌಕಾಪಡೆಯ ನಿವೃತ್ತ ಅಧಿಕಾರಿಯ ಮೇಲೆ ಹಲ್ಲೆ!
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರ ಬೆಂಬಲಿಗರು ನೌಕಾ ಪಡೆಯ ನಿವೃತ್ತ ಅಧಿಕಾರಿಯ ಮೆಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಉದ್ದವ್ ಠಾಕ್ರೆ ಅವರನ್ನು ವ್ಯಂಗ್ಯವಾಗಿ ಚಿತ್ರಿಸಿದ್ದ ಕಾರ್ಟೂನ್ ಒಂದನ್ನು ನೌಕಾ ಪಡೆಯ ನಿವೃತ್ತ ಅಧಿಕಾರಿ ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದರು ಎನ್ನಲಾಗಿದ್ದು, ಈ ಕಾರಣಕ್ಕಾಗಿ ಅವರ ಮೇಲೆ ಶಿವಸೇನಾ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.
ತಮಗೆ ಬಂದಿದ್ದ ವಾಟ್ಸಾಪ್ ಸಂದೇಶದಲ್ಲಿದ್ದ ಕಾರ್ಟೂನ್ ಒಂದನ್ನು ಶರ್ಮಾ ಅವರುವಾಟ್ಸಾಪ್ ಗ್ರೂಪ್ ಒಂದಕ್ಕೆ ಫಾರ್‌ವರ್ಡ್ ಮಾಡಿದ್ದರು. ಇದರಿಂದ ಕೋಪಗೊಂಡಿರುವ ಶಿವಸೇನಾ ಕಾರ್ಯಕರ್ತರು ಅವರ ಮನೆ ಮುಂದೆಯೇ ಬಂದು ಅವರು ಹೊರಗೆ ಬರುತ್ತಿದ್ದಂತೆಯೇ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ.
ಉದ್ಧವ್ ಠಾಕ್ರೆ ಅವರನ್ನು ಅಣಕಿಸುವಂತಹ ಕಾರ್ಟೂನ್ ಒಂದನ್ನು ಹಂಚಿಕೊಂಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ನೌಕಾಪಡೆಯ ನಿವೃತ್ತ ಅಧಿಕಾರಿ ಮದನ್ ಶರ್ಮಾ ಅವರು ಸಮ್ತಾ ನಗರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೂರ್ವ ಕೊಂಡಿವಳಿ ಪ್ರದೇಶದಲ್ಲಿ ನಡೆದ ಈ ಘಟನೆ ಸಂಬಂಧ ಶಿವಸೇನೆಯ ನಾಲ್ವರು ಕಾರ್ಯಕರ್ತನನ್ನು ಬಂಧಿಸಲಾಗಿದೆ.
अभिनेत्री कंगना राणावत के कार्यालय की तोड़फोड़ करके अपनी मर्दानगी दिखाने वाले सत्ताधारी शिवसेना ने अब सत्ता के मद में एक बुजुर्ग भूतपूर्व नौसेना अधिकारी मदन शर्मा को मारपीट करते हुए उनकी आंख को जबरदस्त चोट पहुंचाई है। मुख्यमंत्री घरबैठे तानाशाही चला रहे है। pic.twitter.com/qF2NVcIN55
— Atul Bhatkhalkar (@BhatkhalkarA) September 11, 2020
ಮದನ್ ಶರ್ಮಾ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಿಸಿ ವಿಟಿಯಲ್ಲಿ ಸೆರೆಯಾಗಿದ್ದು, ಅದರ ಆಧಾರದಲ್ಲಿ ಪೊಲೀಸರು ಹಲ್ಲೆ ಮಾಡಿದವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಬೈಕ್ ಮುಟ್ಟಿದ್ದಕ್ಕಾಗಿ ದಲಿತ ಯುವಕನ ಅರೆಬೆತ್ತಲೆಗೊಳಿಸಿ ಮಾರಣಾಂತಿಕ ಹಲ್ಲೆ: 18 ಜನರ ವಿರುದ್ಧ FRI

