ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋವನ್ನು ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಆರೋಪಿಗಳ ಬಂಧನ

ಮಹಿಳೆಯ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ಎಸಿಗಿರುವ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ನಡೆದಿದೆ.

45 ವರ್ಷದ ಮಹಿಳೆಯು ತಾನು ಪಡೆದಿದ್ದ ಸಾಲವನ್ನು ಸಾಲ ಕೊಟ್ಟವರಿಗೆ ಹಿಂದಿರುಗಿಸಲು ತನ್ನ ಸಂಬಂಧಿಯೊಂದಿಗೆ ತೆರಳಿದ್ದರು. ಸಾಲ ಪಾವತಿಸಿ ಹಿಂದಿರುಗಿ ಬರುತ್ತಿದ್ದ ಸಂದರ್ಭದಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಅವರನ್ನು ತಡೆದ ದುಷ್ಕರ್ಮಿಗಳು ಆಕೆಯ ಜೊತೆಗೆ ಬಂದಿದ್ಧ ಯುವಕನಿಗೆ ತಳಿಸಿದ್ದಾರೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಪ್ರತಿದಿನ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ; 16 ನಿಮಿಷಕ್ಕೊಂದು ದೌರ್ಜನ್ಯ!

ಸೆಪ್ಟೆಂಬರ್ 17ರಂದು ಈ ಘಟನೆ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಕಾಮುಕರು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದಾರೆ ಎಂದು ಪೊಲೀಸ್‌ ವರದಿಯಲ್ಲಿ ಹೇಳಾಗಿದೆ.

ಅತ್ಯಾಚಾರ ಪ್ರಕರಣವನ್ನು ಅಲ್ವಾರ್ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿದ್ದು, ಪೊಲೀಸರು 06 ಮಂದಿಯನ್ನು ಬಂಧಿಸಿದ್ದಾರೆ. ವಿಚಾರಣೆಯಲ್ಲಿ ಈ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದಾಗಿ ವಿವರಿಸಿದ್ದಾರೆ ಎಂದು  ಡಿಎಸ್ ಪಿ ಟಿಜಾರಾ ಕುಶಾಲ್ ಸಿಂಗ್ ತಿಳಿಸಿದ್ದಾರೆ.


ಇದನ್ನೂ ಓದಿ:  ಭ್ರಷ್ಟಾಚಾರಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಿರಿ: ಶಂಕರ್ ಬಿದರಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights