ಸ್ವಾರ್ಥ ರಾಜಕಾರಣಕ್ಕೆ ಇನ್ನೊಂದು ಹೆಸರೇ ಸಿದ್ದರಾಮಯ್ಯ: ಸಾ.ರಾ.ಮಹೇಶ್‌

ಸ್ವಾರ್ಥ ರಾಜಕಾರಣಕ್ಕೆ ಇನ್ನೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್​ ಬಿಟ್ಟು ಕಾಂಗ್ರೆಸ್ ಸೇರಿರುವ ಸಿದ್ದರಾಮಯ್ಯನವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಟ ನೈತಿಕತೆ ಇಲ್ಲ  ಎಂದು ಸಾ.ರಾ. ಮಹೇಶ್ ಲೇವಡಿ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅವಕಾಶವಾದಿ ರಾಜಕಾರಣಿ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಟೀಕಿಸಿದ್ದ, ಬೆನ್ನಲ್ಲೇ ಟ್ವೀಟ್‌ ಮಾಡಿರುವ ಸಾ.ರಾ.ಮಹೇಶ್‌ ಅವರು ಸಿದ್ದರಾಮಯ್ಯ ಒಬ್ಬ ಸ್ವರ್ಥ ರಾಜಕಾರಣಿ ಎಂದು ಹೇಳಿದ್ದಾರೆ.

ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿದವರು ಸಿದ್ದರಾಮಯ್ಯ. ಸಮಾಜವಾದದ ಸೋಗನ್ನು ಕಳಚಿಕೊಂಡ ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ. ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ಸಾ.ರಾ. ಮಹೇಶ್ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತೊಗೆಯಿರಿ: ಶಂಕರ್ ಬಿದರಿ

ತಾವು ಬೆಳೆದು ಬಂದ ಪಕ್ಷಕ್ಕೆ ದ್ರೋಹ ಬಗೆದ, ಹತ್ತಿದ ಏಣಿಯನ್ನು ಒದೆಯುವ ಜಾಯಮಾನದ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೆಡಿಎಸ್​ ನಾಯಕ ಸಾ.ರಾ. ಮಹೇಶ್ ಸಿದ್ದರಾಮಯ್ಯನವರ ಮೇಲೆ ಟ್ವಿಟರ್ ಮೂಲಕ ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಎಂತಹ ಸ್ವಾರ್ಥಿ, ಎಡಬಿಡಂಗಿ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ. ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್​ಗೆ ಜಿಗಿದ ಸಿದ್ದರಾಮಯ್ಯ ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ. ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

ಹೆಚ್‌ಡಿಕೆ ಟ್ವೀಟ್‌ ಮಾಡಿದ ಬೆನ್ನಲ್ಲೇ ಸಾ.ರಾ.ಮಹೇಶ್‌ ಕೂಡ ಸಿದ್ದರಾಮಯ್ಯ ಅವರನ್ನು ವಿರೋಧಿಸಿ ಟ್ವೀಟ್‌ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕನ್ನಡದಲ್ಲಿ ಪ್ರಾಮಾಣವಚನ ಸ್ವೀಕರಿಸಿದ ಹೆಚ್‌ಡಿಡಿ; ಹಿಂದಿ ಹೇರಿಕೆ ಸಹಿಸಲ್ಲ ಎಂದ ಸುಮಲತಾ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights