ಬೆಂಬಲ ಬೆಲೆ ಹೆಚ್ಚಿಸಿ ಅನ್ನದಾತರ ಕೋಪ ಶಮನ ಮಾಡಿದ ಕೇಂದ್ರ ಸರಕಾರ..

ಸುಧಾರಣೆಯ ನೆಪದಲ್ಲಿ ಜಾರಿಗೆ ತರಲಾಗಿರವು ಹೊಸ ಕಾನೂನುಗಳ ವಿರುದ್ಧ ಸಿಡಿದೆದ್ದಿರುವ ರೈತ ಸಮುದಾಯವನ್ನು ತೃಪ್ತಿಪಡಿಸಲು ಕೇಂದ್ರ ಸರಕಾರವು ಬೆಂಬಲ ಬೆಲೆ ಹೆಚ್ಚಳ ಮಾಡಿದೆ.

ಕನಿಷ್ಟ 50ರಿಂದ ಗರಿಷ್ಟ 300ರೂಗಳವರೆಗೆ ಹಿಂಗಾರು ಬೆಳೆಗಳ ಬೆಂಬಲ ಬೆಲೆಯನ್ನು ಹೆಚ್ಚಿಸುವ ಪ್ರಸ್ತಾಪಕ್ಕೆ ಮೋದಿ ಸಂಪುಟ ಸೋಮವಾರ ಅಸ್ತು ಎಂದಿದೆ.

ಭಾನುವಾರವಷ್ಟೇ ಎಪಿಎಂಸಿ ಕಾಯ್ದೆ ಸೇರಿದಂತೆ ಎರಡು ಮಸೂದೆಗಳನ್ನು ಬಾರೀ ವಿರೋಧದ ನಡುವೆಯೇ ಸಂಸತ್ತಿನಲ್ಲಿ ಪಾಸು ಮಾಡಿಸಿಕೊಂಡಿದ್ದ ಕೇಂದ್ರ ಸರಕಾರ ದೇಶಾದ್ಯಂತ ರೈತರ ಪ್ರತಿಭಟನೆ ಎದುರಿಸಿತ್ತು.

ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸಿ ಅನ್ನದಾತರ ಕೋಪ ಶಮನ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಟ್ಟಿದೆ.

ಕೃಷಿ ವಲಯಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಬಗ್ಗೆ ರೈತರು ಭಯ ಪಡುವ ಅಗತ್ಯವಿಲ್ಲ. ಕೃಷಿಕರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆಶ್ವಾಸನೆ ನೀಡಿದ್ದಾರೆ.

ಈ ಮಸೂದೆಗಳು ಕೃಷಿ ವಲಯದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಲಿವೆ. ವಿರೋಧ ಪಕ್ಷಗಳು ವಿನಾಃಕಾರಣ ಮಸೂದೆಗಳ ಬಗ್ಗೆ ರೈತರಿಗೆ ತಪ್ಪು ಮಾಹಿತಿ ನೀಡಿ ಅವರ ದಿಕ್ಕು ತಪ್ಪಿಸುತ್ತಿವೆ ಎಂದು ಮೋದಿ ಬೇಸರ ವ್ಯಕ್ತಪಡಿಸಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights