6 ತಿಂಗಳಿಗೊಮ್ಮೆ ಕಾಂಗ್ರೆಸ್ ಅವಿಶ್ವಾಸ ಮಂಡಿಸಲಿ; ಸರ್ಕಾರಕ್ಕೂ ವಿಶ್ವಾಸ ಹೆಚ್ಚಾಗುತ್ತೆ: ಬಿಎಸ್ವೈ
ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದಾರೆ. ಅವರು ಪ್ರತಿ 6 ತಿಂಗಳಿಗೊಮ್ಮೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಇದರಿಂದ ನನಗೂ ವಿಶ್ವಾಸ ಬರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ನವರು ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದರಿಂದ ನನಗೆ 6 ತಿಂಗಳ ಕಾಲ ವಿಶ್ವಾಸ ಬರುತ್ತದೆ. ನನಗೆ ವಿಶ್ವಾಸ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಅವರು ಎಂದು ಹೇಳಿದ್ದಾರೆ.
ನಿನ್ನೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದು, ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಸಿರುವ ಬಿಎಸ್ವೈ, ಕಾಂಗ್ರೆಸ್ ನಾಯಕರು ನನಗೆ ಮತ್ತಷ್ಟು ವಿಶ್ವಾಸ ಮೂಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಭೂಸುಧಾರಣಾ ಮಸೂದೆಯ ವಿರುದ್ಧ ರೈತರ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಮಾತನಾಡಿದ ಅವರು, ಇಂದು ರೈತರ ಜೊತೆಗೆ ಚರ್ಚೆ ಮಾಡುತ್ತೇನೆ. ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆ ಆಗುವುದಿಲ್ಲ. ನೀರಾವರಿ ಜಮೀನು ಖರೀದಿ ಮಾಡಿದವರು ಅದನ್ನು ನೀರಾವರಿಗೆ ಬಳಸಬೇಕು ಎಂದು ಷರತ್ತು ಹಾಕಿದ್ದೇವೆ. ಕೈಗಾರಿಕೆಗಳಿಗೋಸ್ಕರ ನಮ್ಮ ರಾಜ್ಯದಲ್ಲಿ ಬಳಸಿರುವುದು ಕೇವಲ ಶೇ.2 ರಷ್ಟು ಜಮೀನು ಮಾತ್ರ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಕಾಂಗ್ರೆಸ್ ನಿರ್ಧಾರ, ಉಳಿಯುತ್ತಾ ಬಿಜೆಪಿ ಸರ್ಕಾರ!

