ಸೆಪ್ಟೆಂಬರ್ 28ಕ್ಕೆ ನಿಗದಿಯಾಗಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ!
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ಕ್ಕೆ ನಿಗದಿಗಯಾಗಿದ್ದ SSLC ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
ರೈತ ವಿರೋಧಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಮಸೂದೆಗಳನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ಸೆ. 28ರಂದು ವಿಜ್ಞಾನ, ರಾಜ್ಯಶಾಸ್ತ್ರ ವಿಷಯಗಳು ಹಾಗೂ ಅದೇ ದಿನ ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ನಿಗಧಿ ಪಡಿಸಲಾಗಿತ್ತು. ಆದರೆ, ಸೆಪ್ಟೆಂಬರ್ 28ರಂದು ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಹಾಗಾಗಿ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಇತರೆ ಪರೀಕ್ಷೆಗಳು ನಿಗಧಿಯಾಗಿರುವ ದಿನಾಂಕದಂದೇ ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಬಿಹಾರದಲ್ಲಿ ಅಧಿಕಾರಕ್ಕೆ ಬರುತ್ತಾ ಬಿಜೆಪಿ ಮೈತ್ರಿಕೂಟ: ಸಿವೋಟರ್ ಸಮೀಕ್ಷೆ ಹೇಳಿದ್ದೇನು?

