ಸಚಿವ ಸ್ಥಾನಕ್ಕೆ ಸಿಟಿ ರವಿ ರಾಜೀನಾಮೆ!

ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿದ್ದ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರಧ್ಯಕ್ಷ ಜೆಡಿ ನಡ್ಡಾ ಅವರು ಸಿಟಿ ರವಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದು, ಆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ  ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದ ಸಿಟಿ ರವಿ ಅವರು, ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ.

ಒಬ್ಬರಿಗೆ ಒಂದೇ ಸ್ಥಾನ ಎಂಬ ಬಿಜೆಪಿಯ ನಿಯಮಗಳ ಅನುಸಾರವಾಗಿ ಸಿಟಿ ರವಿ ರಾಜೀನಾಮೆ ನೀಡಿದ್ದು, ಅಕ್ಟೋಬರ್ 05 ರಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಕೊನೆಗೂ ರಾಹುಲ್, ಪ್ರಿಯಾಂಕಾಗೆ ಹತ್ರಾಸ್‌ ಹೋಗಲು ಅವಕಾಶ ಕೊಟ್ಟ ನೋಯ್ಡಾ ಪೊಲೀಸ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights